Saturday, October 17, 2026
Saturday, October 17, 2026

ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ

ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ

Date:

ಕುಂದಾಪುರ, ಏ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಭಾ ಪ್ರದರ್ಶನ ‘ಸಂಭ್ರಮ’ದ ಉದ್ಘಾಟನೆ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದ ತೆರೆದ ವೇದಿಕೆಯಲ್ಲಿ ನಡೆಯಿತು. ಕಲಾ ಚಿಗುರು ತಂಡದ ಸಂಸ್ಥಾಪಕ ಚೇತನ್ ನೈಲಾಡಿ ಪ್ರತಿಭಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಇಂತಹ ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಒಳ್ಳೆಯ ವೇದಿಕೆ. ಈ ಮೌಲ್ಯಪೂರ್ಣ ವೇದಿಕೆಯನ್ನು ವಿದ್ಯಾರ್ಥಿಗಳು ಚೆನ್ನಾಗಿ ಬಳಸಿಕೊಳ್ಳಿ ಎಂದರು. ಇದೇ ಸಂದರ್ಭ ಅವರು ಕುಂದಗನ್ನಡ ಭಾಷೆಯ ಅನನ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಪಂಚಮುಖಿ ಶಿಕ್ಷಣದಡಿಯಲ್ಲಿ ಮುನ್ನಡೆಯುತ್ತಿರುವ ನಮ್ಮ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿಷಯಗಳಿಗೆ ವಿಶೇಷ ಮನ್ನಣೆ ನೀಡಲಾಗುತ್ತಿದೆ ಎಂದರು. ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ತೀರ್ಪುಗಾರರಾದ ಶ್ರೀ ವೆಂಕಟರಮಣ ಪದವಿ-ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗೇಂದ್ರ ಕುಮಾರ್ ಬಂಕೇಶ್ವರ, ಸುಜ್ಞಾನ ಪದವಿ-ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಮಥ್ ಶೆಟ್ಟಿ ಹಾಗೂ ಬೈಂದೂರು ಸರಕಾರಿ ಪದವಿ-ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಶಶಿಕಲಾ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಹಾಗೂ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಧೀರ್ ಕುಮಾರ್ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ಸಂಯೋಜಕಿ ಹಾಗೂ ಐಕ್ಯೂಎಸಿ ಸಂಯೋಜಕಿ ದೀಪಿಕಾ ಜಿ. ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೇಯಾ ಖಾರ್ವಿ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!