Monday, July 27, 2026
Monday, July 27, 2026

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಏ.28: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿಯೇ ತಹಶೀಲ್ದಾರ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ಘಟನೆಯ ಬಗ್ಗೆ ಸ್ಥಳೀಯ ವರ್ತಕರಿಂದ ಮಾಹಿತಿ ಪಡೆದರು.

ಉಡುಪಿಯ ನಗರದಲ್ಲಿ ಬಹುದೊಡ್ಡ ಅಗ್ನಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ರಕರಣದಡಿ 10 ಕೋಟಿ ಪರಿಹಾರ ನೀಡುವಂತೆ ಆಗ್ರಹಿಸುವುದಾಗಿ ತಿಳಿಸಿದರು.

ಅಗ್ನಿಶಾಮಕ ದಳ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದೆ ಈ ಬಗ್ಗೆಯೂ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗುವುದು. ಉಡುಪಿ ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗಿದ್ದು, ಈಗಾಗಲೇ ಪ್ರಗತಿಯಲ್ಲಿರುವ ಮಣಿಪಾಲ ಅಗ್ನಿಶಾಮಕ ದಳದ ಕಾಮಗಾರಿ ಪೂರ್ಣಗೊಳಿಸಿ ಸೇವೆಗೆ ಒದಗಿಸಲು ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಾಜಿ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!