Monday, October 19, 2026
Monday, October 19, 2026

ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

Date:

ಮಲ್ಪೆ, ಏ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 23 ರಂದು ನಡೆಯಿತು. ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನ ಸುರೇಶ್ ಪಿಎಂಜೆ.ಎಫ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.

ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷರಾದ ದಿನೇಶ್ ಕಿಣಿ, ವಲಯಾಧ್ಯಕ್ಷ ಲುಯಿಸ್ ಲೋಬೊ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಲಯನ್ಸ್ ಕ್ಲಬ್ ಉಡುಪಿ ಕೋಶಾಧಿಕಾರಿ ರಮಾನಂದ ನಾಯಕ್, ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!