Sunday, October 18, 2026
Sunday, October 18, 2026

ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನ ರಥೋತ್ಸವ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ

ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನ ರಥೋತ್ಸವ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ

Date:

ಉಡುಪಿ, ಏ.30: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ ಮೇ 4 ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಿರಿಯಡ್ಕ – ಕಾರ್ಕಳ ರಾಜ್ಯ ಹೆದ್ದಾರಿಯ ಹಿರಿಯಡ್ಕ ಜಂಕ್ಷನ್‌ನಿಂದ ಕೋಟ್ನಕಟ್ಟೆ ಜಂಕ್ಷನ್ ವರೆಗೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೇಲ್ಕಂಡ ಮಾರ್ಗದಲ್ಲಿ ವಾಹನ ಸಂಚಾರ ತಾತ್ಕಾಲಿವಾಗಿ ನಿಷೇಧಿಸಿ, ಈ ಕೆಳಗಿನಂತೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ. ಪರ್ಯಾಯ ಮಾರ್ಗದ ವಿವರ: ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುವ ಹಾಗೂ ಹರಿಖಂಡಿಗೆ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಮುತ್ತೂರು ಕ್ರಾಸ್-ಮುತ್ತೂರು-ಪಡ್ಡಂ-ಕಾಜರಗುತ್ತು-ಓಂತಿಬೆಟ್ಟು ಮಾರ್ಗವಾಗಿ ಉಡುಪಿ ಕಡೆಗೆ ಸಂಚರಿಸಬೇಕು.

ಉಡುಪಿ ಕಡೆಯಿಂದ ಬೈಲೂರು ಕಾರ್ಕಳ ಕಡೆಗೆ ಹೋಗುವ ವಾಹನಗಳು ಪ್ರಭು ರೋಸ್ ಕಿಚನ್ ಡೈವರ್ಷನ್ ಬಳಿ ಮಾರ್ಗ ಬದಲಿಸಿ ಪಡ್ಡಂ-ಮುತ್ತೂರು-ಮುತ್ತೂರು ಕ್ರಾಸ್ ಮಾರ್ಗವಾಗಿ ಕಾರ್ಕಳ ಬೈಲೂರು-ಹರಿಖಂಡಿಗೆ ಕಡೆಗೆ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!