Monday, October 19, 2026
Monday, October 19, 2026

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

Date:

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಮೇ 3 ಭಾನುವಾರ ನಡೆಯಲಿರುವ ರಾಜ್ಯಮಟ್ಟದ ಕಡಲತೀರ ಚಾರಣ, ಪ್ರಕೃತಿ ಅಧ್ಯಯನ ಹಾಗೂ ಸ್ವಚ್ಛತಾ ಶಿಬಿರದ ತಯಾರಿಗಳನ್ನು ಪರಿಶೀಲಿಸುವ ಸಲುವಾಗಿ ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಶನಿವಾರ ಸಂಜೆ ಭೇಟಿ ನೀಡಿದರು. ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ್ ಅವರು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ಶಿಬಿರ ನಾಯಕ ಮರ್ವಿನ್ ಡಿಸೋಜಾ, ಐಕ್ಯೂಎಸಿ ಸಂಯೋಜಕ ಡಾ. ವಿಷ್ಣುಮೂರ್ತಿ ಪ್ರಭು, ಗಣಕವಿಜ್ಞಾನದ ಪ್ರಾಧ್ಯಾಪಕ ರಾಜಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!