Wednesday, May 6, 2026
Wednesday, May 6, 2026

ರಿಯಾಯಿತಿ ದರದಲ್ಲಿ ಆಸ್ತಿ ತೆರಿಗೆ ಪಾವತಿ: ಅವಧಿ ವಿಸ್ತರಣೆ

ರಿಯಾಯಿತಿ ದರದಲ್ಲಿ ಆಸ್ತಿ ತೆರಿಗೆ ಪಾವತಿ: ಅವಧಿ ವಿಸ್ತರಣೆ

Date:

ಉಡುಪಿ, ಮೇ.4: ಸರ್ಕಾರದ ಆದೇಶದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5 ರ ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು 2026-27 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ ಮೇ 31 ರ ವರೆಗೆ ವಿಸ್ತರಿಸಲಾಗಿದ್ದು, ಉಡುಪಿ ವ್ಯಾಪ್ತಿಯಲ್ಲಿ ಬರುವ ವಾಸ, ವಾಣಿಜ್ಯ, ಕೈಗಾರಿಕೆ, ಸಾರ್ವಜನಿಕ ಕಟ್ಟಡ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳು ಮತ್ತು ಖಾಲಿ ನಿವೇಶನದ ಮಾಲೀಕರು 2026-27 ನೇ ಆಸ್ತಿ ತೆರಿಗೆಯಲ್ಲಿ ಶೇ. 5 ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ಮೇ 31 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಮೇಲಿನ ಎಲ್ಲಾ ಕಟ್ಟಡಗಳ / ಖಾಲಿ ನಿವೇಶನಗಳ ಮಾಲೀಕರು ಇದರ ಸದುಪಯೋಗ ಪಡೆದುಕೊಂಡು ಆಸ್ತಿ ತೆರಿಗೆ ಪಾವತಿಸಿ, ಉಡುಪಿ ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!