Tuesday, October 20, 2026
Tuesday, October 20, 2026

ಕಾಪು: ತ್ರೈಮಾಸಿಕ ಕೆ.ಡಿ.ಪಿ ಸಭೆ

ಕಾಪು: ತ್ರೈಮಾಸಿಕ ಕೆ.ಡಿ.ಪಿ ಸಭೆ

Date:

ಕಾಪು, ಮೇ 5: ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಮಂಗಳವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಅರಣ್ಯ ಮತ್ತು ಕಂದಾಯ ಇಲಾಖೆ 94/ಸಿ, 94/ಸಿಸಿ ಹಕ್ಕು ಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು ಹಾಗೂ ಡೀಮ್ಡ್ ಫಾರೆಸ್ಟ್ ಇರುವ ಸ್ಥಳದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿ ಕಂದಾಯ ಭೂಮಿ ಹಸ್ತಾಂತರಿಸಲು ಕ್ರಮವಹಿಸುವಂತೆ, ಅಲ್ಲಲ್ಲಿ ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕೊಳವೆ ಬಾವಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ, ಕೆಲ ದಿನಗಳಿಂದ ಕಾಪು ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೆಕರ್ ಅಳವಡಿಸುವಂತೆ, ಕಿಂಡಿ ಆಣೆಕಟ್ಟುಗಳ ಸಮರ್ಪಕ ನಿರ್ವಹಣೆ ಬಗ್ಗೆ ಹಾಗೂ ಮುಂಗಾರು ಪ್ರವೇಶಿಸುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಪೂರೈಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಪೂರ್ಣಿಮ ಬಿ.ಸಿ., ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ತಹಶೀಲ್ದಾರರಾದ ಅಂನತ ಶಂಕರ್ ಹಾಗೂ ಕಾಪು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!