Monday, June 8, 2026
Monday, June 8, 2026

ಜಗತ್ತಿನ ಸೇವೆಯಲ್ಲಿ ರೆಡ್ ಕ್ರಾಸ್ ಅನನ್ಯ ಕೊಡುಗೆ: ಡಾ. ಅಶೋಕ್

ಜಗತ್ತಿನ ಸೇವೆಯಲ್ಲಿ ರೆಡ್ ಕ್ರಾಸ್ ಅನನ್ಯ ಕೊಡುಗೆ: ಡಾ. ಅಶೋಕ್

Date:

ಉಡುಪಿ, ಮೇ 8: ಅಂತರಾಷ್ಟ್ರೀಯ ರೆಡ್‌ಕ್ರಾಸ್ ಕಳೆದ ಒಂದೂವರೆ ಶತಮಾನಗಳಿಂದ ಜಗತ್ತಿನ ವಿವಿಧೆಡೆ ಮಾನವೀಯ ಸೇವೆ ಸಲ್ಲಿಸಿದೆ. ಪ್ರಕೃತಿ ವಿಕೋಪ ಮತ್ತು ಯುದ್ಧ ಸಂದರ್ಭದಲ್ಲಿ ಅದು ಸಲ್ಲಿಸಿದ ಸೇವೆ ಅನನ್ಯವಾದುದು. ಈ ದೃಷ್ಟಿಯಿಂದಲೇ ಅರ್ಹವಾಗಿಯೇ ನಾಲ್ಕು ಬಾರಿ ನೊಬೆಲ್ ಪ್ರಶಸ್ತಿ ಪಡೆದಿದೆ. ಉಡುಪಿ ಜಿಲ್ಲಾ ರೆಡ್‌ಕ್ರಾಸ್ ರಾಜ್ಯದಲ್ಲೆ ಪ್ರತಿಷ್ಠಿತವಾಗಿದೆ ಎಂದು ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಹೇಳಿದರು. ಅವರು ಜಿಲ್ಲಾ ರೆಡ್‌ಕ್ರಾಸ್ ಘಟಕದಲ್ಲಿ ರೆಡ್‌ಕ್ರಾಸ್ ದಿನಾಚರಣೆಯ ಅಂಗವಾಗಿ ರೆಡ್‌ಕ್ರಾಸ್ ಸ್ಥಾಪಕ ಹೆನ್ರಿ ಡ್ಯುನಾಂಟ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ರೆಡ್ ಕ್ರಾಸ್ ಇತಿಹಾಸವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಶ್ರವಣ ಸಾಧನ ಮತ್ತು ಗೃಹಪಯೋಗಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಹೈಕೋರ್ಟ್ ವಕೀಲ ಶ್ರೀಕಾಂತ್ ಶಂಕರನಾರಾಯಣ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ, ರೆಡ್ ಕ್ರಾಸ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಮತ್ತು ವಾರ್ತಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ. ಏರಿಕೆ

ನವದೆಹಲಿ, ಜೂ.7: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ....

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಬಲಿಯಾಗಲಿದೆ: ರಮೇಶ್ ಕಾಂಚನ್

ಉಡುಪಿ, ಜೂ.7: ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಮೂಲಕ...

ಅಂತರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನ ಸುರೇಶ್ ಅವರಿಗೆ ಅವಳಿ ಚಿನ್ನದ ಪದಕ

ಉಡುಪಿ, ಜೂ.7: ಸಂಯುಕ್ತ ಭಾರತೀಯ ಕೇಲ್ ಫೌಂಡೇಷನ್ ವತಿಯಿಂದ ಆಯೋಜಿಸಿದ 14ನೇ...
error: Content is protected !!