Saturday, September 12, 2026
Saturday, September 12, 2026

ಮೇ 14 ರಿಂದ 17- ದೊಡ್ಡಣಗುಡ್ಡೆಯಲ್ಲಿ ಮಾವು ಮೇಳ

ಮೇ 14 ರಿಂದ 17- ದೊಡ್ಡಣಗುಡ್ಡೆಯಲ್ಲಿ ಮಾವು ಮೇಳ

Date:

ಉಡುಪಿ, ಮೇ 12: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘ, (ರಿ), ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ ಇವರ ವತಿಯಿಂದ ಮೇ 14 ರಿಂದ 17 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿರುತ್ತದೆ.

ಮಾವು ಮೇಳ-2026 ರ ಉದ್ಘಾಟನಾ ಸಮಾರಂಭವು ಮೇ 14 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಬೆಂಗಳೂರು ತೋಟಗಾರಿಕೆ ಇಲಾಖೆಯ ನಿರ್ದೇಶಕ ಇಬ್ರಾಹಿಂ ಮೈಗೂರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ತೋಟಗಾರಿಕೆ ಅಪರ ನಿರ್ದೇಶಕರಾದ ಡಾ. ಎಸ್ ನಂದಾ, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!