Thursday, July 23, 2026
Thursday, July 23, 2026

ಮೇ 17: ತೆಂಕನಿಡಿಯೂರು ಕಾಲೇಜಿನಲ್ಲಿ ಅಂಚೆಚೀಟಿ, ನಾಣ್ಯ ಪ್ರದರ್ಶನ

ಮೇ 17: ತೆಂಕನಿಡಿಯೂರು ಕಾಲೇಜಿನಲ್ಲಿ ಅಂಚೆಚೀಟಿ, ನಾಣ್ಯ ಪ್ರದರ್ಶನ

Date:

ತೆಂಕನಿಡಿಯೂರು, ಮೇ 14: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ ಕಾರ್ಯಕ್ರಮ ಬೆಸುಗೆ 2026 ಮೇ 17 ಭಾನುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದ್ದು ಅಂದು ಕಾಲೇಜಿನ ಆವರಣದಲ್ಲಿ ಖ್ಯಾತ ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಕಾರರಾದ ಕೆ. ಲಕ್ಷ್ಮೀನಾರಾಯಣ ನಾಯಕ್ ಅವರ ನಾಣ್ಯ ಹಾಗೂ ಅಂಚೆಚೀಟಿ ಪ್ರದರ್ಶನ ನಡೆಯಲಿದೆ. ಇವರ ಬಳಿ 175 ಕ್ಕೂ ಹೆಚ್ಚಿನ ದೇಶಗಳ ನಾಣ್ಯ, ನೋಟು ಹಾಗೂ 190 ರಾಷ್ಟ್ರಗಳ ಅಂಚೆಚೀಟಿಗಳ ಅಪಾರ ಸಂಗ್ರಹವಿದ್ದು ಪ್ರದರ್ಶನಕ್ಕೆ ವಿಶೇಷ ಮೆರುಗು ನೀಡಲಿದೆ. ಸುಮಾರು 4 ದಶಕಗಳಿಂದ ನಾಣ್ಯ ಹಾಗೂ ಅಂಚೆಚೀಟಿ ಸಂಗ್ರಹ ನಡೆಸುತ್ತಿರುವ ಇವರು ಈಗಾಗಲೇ ಜಿಲ್ಲಾಧಿಕಾರಿ ಕಛೇರಿ, ಕಾರಂತ ಥೀಮ್ ಪಾರ್ಕ್ ಸೇರಿದಂತೆ ಹಲವಾರು ಕಡೆಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಪ್ರಾಂಶುಪಾಲರು, ಹಳೆ ವಿದ್ಯಾರ್ಥಿ ಸಂಘದ ಸಂಚಾಲಕರು, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!