Tuesday, September 1, 2026
Tuesday, September 1, 2026

ಶ್ರೀ ಕ್ಷೇತ್ರ ಶಂಕರಪುರ: ಅನ್ನದಾಹ ಕಿಟ್ ಯೋಜನೆಗೆ ಚಾಲನೆ

ಶ್ರೀ ಕ್ಷೇತ್ರ ಶಂಕರಪುರ: ಅನ್ನದಾಹ ಕಿಟ್ ಯೋಜನೆಗೆ ಚಾಲನೆ

Date:

ಕಟಪಾಡಿ, ಮೇ 14: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ ಇದರ 7ನೇ ಮಹತ್ವದ ಸೇವಾ ಯೋಜನೆ ಸಾಯಿ ಅನ್ನದಾಹ ಕಿಟ್ ವಿತರಣೆಗೆ ಮಂದಿರದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಮಠ ಮಂದಿರಗಳು ಆಧ್ಯಾತ್ಮ ಮತ್ತು ಸಮಾಜಮುಖಿ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಸಾಯಿ ಮುಖ್ಯಪ್ರಾಣ ದೇವಸ್ಥಾನ ವತಿಯಿಂದ ನಡೆಯುತ್ತಿರುವ ಈ ಅಪೂರ್ವವಾದ ಸೇವಾ ಕಾರ್ಯ ನಿರಂತರವಾಗಿ ನಡೆಯಲಿ ಎಂದರು.

ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡಿ ನಮ್ಮ ಸಮಾಜದಲ್ಲಿ ಅನೇಕ ಮಂದಿ ಎರಡು ಹೊತ್ತಿನ ಊಟಕ್ಕೂ ಕಷ್ಟಪಡುವ ಜನರಿದ್ದಾರೆ ಇವರನ್ನು ಗುರುತಿಸಿ ಕ್ಷೇತ್ರದ ವತಿಯಿಂದ ಅವರಿಗೆ ತಿಂಗಳಿಗೆ ಬೇಕಾದ ಅಕ್ಕಿ ಸೇರಿದಂತೆ ದಿನಸಿ ಸಾಮಗ್ರಿಗಳನ್ನು ನೀಡಲಾಗುತ್ತದೆ. ಈ ಈ ಸೇವಾ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದರು.

ಶ್ರೀ ಕ್ಷೇತ್ರ ಶಂಕರ್ ಪುರ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ, ಟ್ರಸ್ಟಿಗಳಾದ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸಮಾಜಸೇವಕ ಪ್ರಶಾಂತ್ ಪೂಜಾರಿ ಕಾಪು, ಕ್ಷೇತ್ರದ ಹಿತೈಷಿಗಳಾದ ರಾಮಣ್ಣ ಪೂಜಾರಿ, ವಿಜಯ್ ಕುಂದರ್, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಡ ಕುಟುಂಬದ ವಿದ್ಯಾರ್ಥಿನಿಗೆ ಶಿಕ್ಷಣ ದತ್ತು ಸ್ವೀಕಾರ ಸೇರಿದಂತೆ ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರದ ಭಕ್ತರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!