Sunday, June 7, 2026
Sunday, June 7, 2026

ಬಜೆ ಅಣೆಕಟ್ಟಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ

ಬಜೆ ಅಣೆಕಟ್ಟಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ

Date:

ಹಿರಿಯಡಕ, ಮೇ 16: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕಿಂತ ನೀರಿನ ಲಭ್ಯತೆ ಕಡಿಮೆ ಇದ್ದು, ಉಡುಪಿ ನಗರ ಭಾಗಕ್ಕೆ ನಿರಂತರ ನೀರು ಪೂರೈಕೆಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ಘಟಕವನ್ನು ಉತ್ತಮವಾಗಿ ನಿರ್ವಹಿಸಿ ಉಡುಪಿ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.

ನಗರಸಭೆ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಮಾಜಿ ಸದಸ್ಯರಾದ ಗಿರೀಶ್ ಅಂಚನ್, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್, ಸಹಾಯಕ ಅಭಿಯಂತರ ಚೇತನ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತದಲ್ಲಿ ಹೂಡಿಕೆಯನ್ನು ಸುಲಭಗೊಳಿಸಲು ವಿದೇಶಿ ಬಂಡವಾಳ ಹೂಡಿಕೆದಾರರಿಗೆ ನಿಯಮಗಳನ್ನು ಸರಳಗೊಳಿಸಿದ ಆರ್.ಬಿ.ಐ

ಮುಂಬಯಿ, ಜೂ.6: ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಸರ್ಕಾರಿ ಭದ್ರತೆಗಳಲ್ಲಿ ವಿದೇಶಿ...

ಮಣಿಪಾಲ ಜ್ಞಾನಸುಧಾ: ವಿಶ್ವ ಪರಿಸರ ದಿನಾಚರಣೆ

ಮಣಿಪಾಲ, ಜೂ.6: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ರೋಟರಿ...

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜೂ.6: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ...

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ: ಎಂ.ಪುರುಷೋತ್ತಮ್

ಉಡುಪಿ, ಜೂ.6: ಮನುಷ್ಯ ಸಂಕುಲ ಉಳಿವಿಗಾಗಿ ಪ್ರಕೃತಿ ಹಾಗೂ ಜೀವ ವೈವಿಧ್ಯಗಳು...
error: Content is protected !!