Thursday, July 23, 2026
Thursday, July 23, 2026

ತ್ರಿಶಾ ವಿದ್ಯಾ ಕಾಲೇಜು 3 ದಿನಗಳ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ

ತ್ರಿಶಾ ವಿದ್ಯಾ ಕಾಲೇಜು 3 ದಿನಗಳ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ

Date:

ಕಟಪಾಡಿ, ಮೇ 17: ತ್ರಿಶಾ ಸಮೂಹ ಸಂಸ್ಥೆ, ರಿಲಯನ್ಸ್ ಫೌಂಡೇಶನ್ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಗಳ ಸಹಯೋಗದಲ್ಲಿ ಮೇ 13 ರಿಂದ 15ರವರೆಗೆ ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಮೂರು ದಿನಗಳ ‘ಎಮ್ಪ್ಲಾಯೆಬಿಲಿಟಿ ಸ್ಕಿಲ್ಸ್ ಪ್ರೊಗ್ರ್ಯಾಮ್’ ನಡೆಯಿತು. ಕಾರ್ಯಕ್ರಮವನ್ನು ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲ ಕೃಷ್ಣ ಭಟ್ ಉದ್ಘಾಟಿಸಿದರು. ರಿಲಯನ್ಸ್ ಸ್ಕಿಲ್ಲಿಂಗ್ ಅಕಾಡೆಮಿಯ ಪ್ಲೇಸ್‌ಮೆಂಟ್ ಅಧಿಕಾರಿ ಪ್ರೀತಮ್ ಪ್ರಸಾದ್ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ, ಸಂವಹನ ಕೌಶಲ್ಯ ಹಾಗೂ ವೃತ್ತಿ ಸಿದ್ಧತೆಯ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರುತಿ ಹಾಗೂ ಪೂಜಿತಾ ವಿವಿಧ ತರಬೇತಿ ಅವಧಿಗಳನ್ನು ನಡೆಸಿಕೊಟ್ಟರು. ಮೊದಲ ದಿನ ಸ್ವಾಟ್ ಅನಾಲಿಸಿಸ್ ಕುರಿತು ಮಾಹಿತಿ ನೀಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಶಕ್ತಿಗಳು, ಅವಕಾಶಗಳು ಹಾಗೂ ಸವಾಲುಗಳನ್ನು ಗುರುತಿಸಿಕೊಳ್ಳುವಂತೆ ಮಾರ್ಗದರ್ಶನ ನೀಡಲಾಯಿತು.

ಎರಡನೇ ದಿನ ಸಂವಹನ ಕೌಶಲ್ಯ ಹಾಗೂ ಗುರಿ ನಿರ್ಧಾರ ಕುರಿತು ತರಬೇತಿ ನೀಡಲಾಯಿತು. ಪರಿಣಾಮಕಾರಿ ಸಂವಹನ, ಆತ್ಮವಿಶ್ವಾಸ ವೃದ್ಧಿ ಹಾಗೂ ಜೀವನ ಗುರಿಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಮೂರನೇ ದಿನ ರೆಸ್ಯೂಮ್ ತಯಾರಿ ಹಾಗೂ ಸಂದರ್ಶನ ಕೌಶಲ್ಯಗಳ ಕುರಿತು ಮಾಹಿತಿ ನೀಡಲಾಯಿತು. ಉದ್ಯೋಗ ಸಂದರ್ಶನದಲ್ಲಿ ಆತ್ಮವಿಶ್ವಾಸದಿಂದ ಉತ್ತರಿಸುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು. ವಿದ್ಯಾರ್ಥಿಗಳಲ್ಲಿ ಉದ್ಯೋಗ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಸಹಾಯಕವಾಯಿತು.

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊ. ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಲದೀಪ್ ವೈ ಯು ಹಾಗೂ ಪ್ಲೇಸ್‌ಮೆಂಟ್ ವಿಭಾಗದ ಮುಖ್ಯಸ್ಥರಾದ ಪ್ರೊ. ಅಲ್ಬನ್ ಆಂಥೋನಿ ಪಿರೇರಾ ಕಾರ್ಯಕ್ರಮದಲ್ಲಿ ಉಪಸ್ಥಿತಿಯಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!