Thursday, July 23, 2026
Thursday, July 23, 2026

ಕೊಡವೂರು ಶಂಕರನಾರಾಯಣ ದೇವಸ್ಥಾನಲ್ಲಿ ಭಕ್ತ ಸಮೂಹ; ಸಹಸ್ರಾರು ಮಂದಿಯಿಂದ ಭೋಜನ ಸ್ವೀಕಾರ

ಕೊಡವೂರು ಶಂಕರನಾರಾಯಣ ದೇವಸ್ಥಾನಲ್ಲಿ ಭಕ್ತ ಸಮೂಹ; ಸಹಸ್ರಾರು ಮಂದಿಯಿಂದ ಭೋಜನ ಸ್ವೀಕಾರ

Date:

ಕೊಡವೂರು, ಮೇ 18: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ ಸಾವಿರಾರು ಮಂದಿ ಭಕ್ತರು ದೇವರ ದರ್ಶನ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು. ಜಿಲ್ಲೆಯ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರ ಜಿಲ್ಲೆಗಳಿಂದಲೂ ಭಕ್ತರು ಆಗಮಿಸಿ ಯಾಗದಲ್ಲಿ ಪಾಲ್ಗೊಂಡರು. ವೇದಘೋಷ, ಪೂಜೆ, ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡುವೆ ದೇವಸ್ಥಾನ ಆವರಣದಲ್ಲಿ ಭಕ್ತಿಭಾವ ಮೇಳೈಸಿತು‌. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಮಂದಿ ಭೋಜನ ಸ್ವೀಕರಿಸಿದರು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರ್ಯಾಯ ಮಾದರಿಯಲ್ಲಿ ನಡೆಯುತ್ತಿರುವ ಮಹಾರುದ್ರಯಾಗಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಕ್ಷಿಯಾದರು. ದೇವಸ್ಥಾನ ಪರಿಸರದಲ್ಲಿ ದಿನವಿಡೀ ಭಕ್ತರ ಸಂಚಾರ ಕಂಡುಬಂದಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!