Saturday, November 14, 2026
Saturday, November 14, 2026

ಮಲ್ಪೆ: ಭವ್ಯ ಗಂಗಾರತಿ; ಕಡಲ ತೀರದಲ್ಲಿ ಮೊಳಗಿತು ಶಂಖನಾದ

ಮಲ್ಪೆ: ಭವ್ಯ ಗಂಗಾರತಿ; ಕಡಲ ತೀರದಲ್ಲಿ ಮೊಳಗಿತು ಶಂಖನಾದ

Date:

ಕೊಡವೂರು, ಮೇ 18: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು. ಕಾಶಿಯಿಂದ ಆಗಮಿಸಿದ್ದ ಪುರೋಹಿತರು ವೇದಘೋಷ ಹಾಗೂ ಮಂತ್ರೋಚ್ಚಾರಣೆಯೊಂದಿಗೆ ಗಂಗಾರತಿ ನೆರವೇರಿಸಿದರು. ಮತ್ಸ್ಯಸಂಪತ್ತು ವೃದ್ಧಿಗಾಗಿ ಸಮುದ್ರರಾಜನಿಗೆ ವಿಶೇಷ ಆರತಿ ಮಾಡಲಾಯಿತು. ಸಮುದ್ರ ತೀರದಲ್ಲಿ ಆಕರ್ಷಕ ದೀಪಗಳೊಂದಿಗೆ ನಡೆದ ಗಂಗಾರತಿಯು ಭಕ್ತರ ಗಮನ ಸೆಳೆಯಿತು. ಮಹಾರುದ್ರಯಾಗದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ನಡೆದ ಗಂಗಾರತಿ ವಿಶೇಷ ಆಕರ್ಷಣೆಯಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ಭಕ್ತರು ದೀಪಾರಾಧನೆ ಸಲ್ಲಿಸಿ ದೇವರ ಕೃಪೆಗೆ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ಉಡುಪಿ, ನ.14: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಆದರ್ಶ ಆಸ್ಪತ್ರೆ, ಉಡುಪಿ...

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...
error: Content is protected !!