Wednesday, June 10, 2026
Wednesday, June 10, 2026

ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಉಡುಪಿ, ಮೇ 18: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15 ಮೆಟ್ರಿಕ್ ಪೂರ್ವ ಹಾಗೂ 8 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹೆಚ್.ಎಂ.ಐ.ಎಸ್ತಂ ತ್ರಾಂಶದ https://swdhmis.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209, ಕುಂದಾಪುರ ದೂ.ಸಂಖ್ಯೆ: 08254-230609, 298089, ಮೊ.ನಂ: 9480843208 ಹಾಗೂ ಕಾರ್ಕಳ ದೂ.ಸಂಖ್ಯೆ : 08258-298134, 232133, ಮೊ.ನಂ: 9480843207 ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!