Thursday, August 20, 2026
Thursday, August 20, 2026

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಕಲಾ ಕೌಸ್ತುಭ

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಕಲಾ ಕೌಸ್ತುಭ

Date:

ಪರ್ಕಳ, ಮೇ 18: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 23ನೇ ವರ್ಷದ ಸಂಭ್ರಮ ಕಲಾ ಕೌಸ್ತುಭ ಕಾರ್ಯಕ್ರಮ ಭಾನುವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಭಾಗವತರಾದ ಗಣೇಶ್ ಆಚಾರ್ಯ ಬಿಲ್ಲಾಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷರಾದ ನಟರಾಜ ಪರ್ಕಳ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಕಾಶವಾಣಿಯ ನಿವೃತ್ತ ಸಹಾಯಕ ನಿರ್ದೇಶಕರಾದ ಡಾ. ಮಾಲತಿ ಆರ್. ಭಟ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಭಟ್ ಕುರ್ಯ, ಅಂತರಾಷ್ಟ್ರೀಯ ಮಯೂರಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ವಂದನಾ ರೈ ಕಾರ್ಕಳ, ಡಿಜಿಟಲ್ ಕ್ರಿಯೇಟರ್ ಶಿಕ್ಷಕಿ ಸಂಧ್ಯಾ ಕಾಮತ್ ಆಗಮಿಸಿದ್ದರು. ವೇದಿಕೆ ಪೋಷಕರಾದ ಭುವನ ಪ್ರಸಾದ್ ಹೆಗ್ಡೆ ಮಣಿಪಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು

ವೇದಿಕೆ ಸಂಚಾಲಕರಾದ ಮಂಜುನಾಥ ಉಪಾಧ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಅಧ್ಯಕ್ಷರಾದ ನಟರಾಜ್ ಪರ್ಕಳ ಸ್ವಾಗತಿಸಿದರು. ಸೃಜನಶೀಲ ಛಾಯಾಗ್ರಹಾಕರಾದ ನಿಧೀಶ್ ಪರ್ಕಳ ಹಾಗೂ ಗಣಪತಿ ವಿಗ್ರಹ ತಯಾರಕರಾದ ದೇವರಾಜ್ ನಾಯಕ್ ಸಣ್ಣಕ್ಕಿಬೆಟ್ಟು ಇವರನ್ನು ಸನ್ಮಾನಿಸಲಾಯಿತು. ಅಶೋಕ್ ಸಣ್ಣಕ್ಕಿಬೆಟ್ಟು ಕಾರ್ಯಕ್ರಮ ನಿರೂಪಸಿದರು. ಶ್ರೀನಿವಾಸ್ ನಾಯಕ್ ಚಕ್ರತೀರ್ಥ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ನಾಟ್ಯ ತಂಡ ಮರ್ಣೆ ಇದರ ಕಲಾವಿದರಿಂದ ದೀಕ್ಷಾ ಗುಂಡುಪಾದೆ ನಿರ್ದೇಶನದಲ್ಲಿ ಧರೆಗಿಳಿದ ಜಗನ್ಮಾತೆ ನೃತ್ಯರೂಪಕ ಹಾಗೂ ಡೆನ್ನಾನ ಕಲಾವಿದರು ಕಾರ್ಕಳ ಇವರಿಂದ ಡೆನ್ನಾನ ನಾಟಕ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!