Tuesday, July 28, 2026
Tuesday, July 28, 2026

ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ದಿನಾಚರಣೆ

ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ದಿನಾಚರಣೆ

Date:

ಉಡುಪಿ, ಮೇ 19: ಉಡುಪಿ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ ಕಾರ್ಯಕ್ರಮವು ಶನಿವಾರ ಎಂಜಿಎಂ ಕ್ಯಾಂಪಸ್‌ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಅಧ್ಯಕ್ಷ ಧೀರಜ್ ಪ್ರವೀಣ್ ಕುಮಾರ್ ಸ್ವಾಗತ ಭಾಷಣ ಮಾಡಿದರು. ಬಳಿಕ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕರೇನ್ ಲಿಸಾ ಅರೋನ್ ಮಂಡಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಡಾ. ಎಂ. ವಿಶ್ವನಾಥ್ ಪೈ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳ ಪರಿಚವನ್ನು ಸೂರಜ್ ತೃತೀಯ ಬಿಸಿಎ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಖ್ಯಾತ ನೃತ್ಯ ನಿರ್ದೇಶಕ, ನಟ ಹಾಗೂ ನಿರ್ದೇಶಕರಾದ ಎಲ್ಟನ್ ಜೆಫ್ ಮತ್ತು ತುಳು- ಕನ್ನಡ ನಟಿ ಅನ್ವಿತಾ ಸಾಗರ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿ ಕಲ್ಯಾಣ ಮಂಡಳಿ ಕಾರ್ಯಕ್ರಮಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ ಆಚಾರ್ಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ, ಪೋಷಕರ-ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ನಾಯಕ್, ಕಾರ್ಯದರ್ಶಿ ಭಾರತಿ ಜಯಕರ್, ಎಂ ಜಿ ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್, ಬಿಬಿಎ/ ಬಿಕಾಂ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಉಪಸ್ಥಿತರಿದ್ದರು. ಡಾ. ಶ್ರೀಧರ್ ಆರ್ ಪೈ, ಎ. ಓ ಅಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಇವರು ಅಧ್ಯಕ್ಷೀಯ ಮಾತುಗಳನ್ನಾಡಿದರು. ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಜಂಟಿ ಕಾರ್ಯದರ್ಶಿ ಅನನ್ಯಾ ಜಿ. ಹೆಗ್ಡೆ ವಂದಿಸಿದರು. ಕಾರ್ಯಕ್ರಮವನ್ನು ಮಧುರಾ ಹೆಬ್ಬಾರ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ...
error: Content is protected !!