Friday, September 11, 2026
Friday, September 11, 2026

61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Date:

ಉಡುಪಿ, ಮೇ 21: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2026 ರ ಜೂನ್ 1 ನೇ ತಾರೀಕಿನಿಂದ ಜುಲೈ 31 ನೇ ತಾರೀಕಿನವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ ಹಾಗೂ ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರಿಕೆ ನಿಷೇಧವಿರುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿಗಳು ಮೇ 31 ರ ಒಳಗೆ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡಿದ ದೋಣಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಜಿಲ್ಲೆಯ ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!