Friday, September 11, 2026
Friday, September 11, 2026

ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

Date:

ಕುಂದಾಪುರ, ಮೇ 21: ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್‌ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು.

ಬಲಾಡಿಯ ಶ್ರೀ ಸ್ವಾಮಿಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ಪ್ರಭಾಕರ ಶೆಟ್ಟಿ, ಮೇಳದ ಯಜಮಾನರಾದ ವಿಠಲ ಪೂಜಾರಿ, ವರ್ತೆ ಪಂಜುರ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಂಕರ ಎಸ್ ಕಾಂಚನ್, ಸದಸ್ಯರಾದ ಕೇಶವ ಕಾಂಚನ್, ಮಂಜುನಾಥ ಗುಡ್ರಿ, ವಿಜಯ್ ಕಾಂಚನ್, ರಾಘವೇಂದ್ರ ನೆಂಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸನ್ಮಾನಿತರನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!