Friday, October 2, 2026
Friday, October 2, 2026

ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಸಭೆ

ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಸಭೆ

Date:

ಕಾಪು, ಮೇ 21: ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಶಾಸಕರಾದ ಗುರ್ಮೆ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ಗುರುವಾರ ಸಭೆ ನಡೆಸಿ ಚರ್ಚಿಸಲಾಯಿತು.

ಸಭೆಯಲ್ಲಿ ಕಾಪು ತಾಲೂಕು ವ್ಯಾಪ್ತಿಯ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗಳಲ್ಲಿನ ಸರಕಾರಿ ನಿವೇಶನಗಳನ್ನು ನಿವೇಶನ ರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಬಗ್ಗೆ ಮತ್ತು ಈಗಾಗಲೇ ಹಸ್ತಾಂತರಗೊಂಡ ನಿವೇಶನಗಳಲ್ಲಿ ಭೌತಿಕ ಹಾಗೂ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಫಲಾನುಭವಿಗಳಿಗೆ ನಿವೇಶನಗಳನ್ನು ವಿತರಿಸುವ ಬಗ್ಗೆ ಚರ್ಚಿಸಲಾಯಿತು.

ಕಾಪು ತಹಶೀಲ್ದಾರ ಅನಂತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಹಾಗೂ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!