Friday, October 2, 2026
Friday, October 2, 2026

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಎ ಸುವರ್ಣ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಎ ಸುವರ್ಣ

Date:

ಉಡುಪಿ, ಮೇ 22: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿರಬೇಕು.

ದಿನಾಂಕ: 15.07.2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 63649 31790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟನೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!