Thursday, July 23, 2026
Thursday, July 23, 2026

ಕಾಳಾವರ ವರದರಾಜ ಕಾಲೇಜು: ಪ್ರತಿಭಾ ದಿನಾಚರಣೆ

ಕಾಳಾವರ ವರದರಾಜ ಕಾಲೇಜು: ಪ್ರತಿಭಾ ದಿನಾಚರಣೆ

Date:

ಕುಂದಾಪುರ, ಮೇ 22: ಶಿಸ್ತು, ಸುಸಂಸ್ಕೃತ ನಡವಳಿಕೆ ಮೂಲಕ ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಎತ್ತಿ ಹಿಡಿಯಬೇಕು ಮತ್ತು ಹಿರಿಯವರು ಹಾಕಿಕೊಟ್ಟ ಮಾರ್ಗವನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಚಲಿತದಲ್ಲಿ ಸಿಗುವಂತಹ ಅವಕಾಶಗಳ ಸದ್ಬಳಕೆ ಮಾಡಿ ಕೌಶಲ, ಪ್ರತಿಭೆ ಮತ್ತು ನಿಷ್ಠೆಯನ್ನು ಉದ್ದೀಪನಗೊಳಿಸುವುದರಿಂದ ವಿದ್ಯೆಯ ವರ್ಚಸ್ಸು ಅಧಿಕವಾಗುತ್ತದೆ ಎಂದು ರಾಜಗೋಪಾಲ ಆಚಾರ್ಯ ರಥ ಶಿಲ್ಪಿಗಳು ಕೋಟೇಶ್ವರ ಇವರು ಹೇಳಿದರು. ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ಸರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರತಿಭಾ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಾ ಸ್ಪರ್ಧೆ ಸಿಂಚನ ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ಧ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಭವಿಷ್ಯದ ಪಯಣದಲ್ಲಿ ಉನ್ನತ ಶಿಖರ ಮುಟ್ಟಬೇಕು ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕ ನಾಗರಾಜ ಯು., ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿ ಪ್ರತಿನಿಧಿಗಳಾದ ವೈಷ್ಣವಿ ಮತ್ತು ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಸುಮಶ್ರೀ, ಉಪನ್ಯಾಸಕರು ಕುಂದಾಪುರ, ವಿದೂಷಿ ಶ್ರೀವಿದ್ಯಾ ಸಂದೇಶ, ಭರತನಾಟ್ಯ ಕಲಾವಿದೆ ಉಡುಪಿ ಮತ್ತು ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸಕರು ಉಡುಪಿ ನಿರ್ಣಾಯಕರಾಗಿ ಸಹಕರಿಸಿದರು. ಎಂ.ಕಾಂ. ತರಗತಿ, ಅಂತಿಮ ಬಿ.ಎ. ಮತ್ತು ಬಿ.ಸಿ.ಎ. ಹಾಗೂ ಬಿ.ಬಿ.ಎ. ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಹಾಗೂ ತೃತೀಯ ಸಮಗ್ರ ಪ್ರಶಸ್ತಿಯನ್ನು ಹಂಚಿಕೊಂಡರು. ಎಂ.ಕಾಂ. ವಿದ್ಯಾರ್ಥಿನಿ ಅಮೃತ ಮತ್ತು ತಂಡದವರು ಪ್ರಾರ್ಥಿಸಿದರು. ಸಾಂಸ್ಕೃತಿಕ ಸಂಚಾಲಕರಾದ ಡಾ. ಶೇಖರ ಬಿ. ಸ್ವಾಗತಿಸಿದರು. ಉಪನ್ಯಾಸಕರಾದ ಡಾ. ಚೇತನಾ ಎಂ., ಜಯಂತಿ ಬಾಯ್ ಮತ್ತು ಚೈತ್ರಾ ಹೆಚ್. ಇವರು ನಿರ್ಣಾಯಕರನ್ನು ಪರಿಚಯಿಸಿದರು. ಡಾ. ಭಾಗೀರಥಿ ನಾಯ್ಕ ಸಾಂಸ್ಕೃತಿಕ ಸಂಘದ ಸದಸ್ಯರು ವಂದಿಸಿದರು. ಇತಿಹಾಸ ವಿಭಾಗ ಉಪನ್ಯಾಸಕರಾದ ಶರಾವತಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!