Friday, July 3, 2026
Friday, July 3, 2026

ಕೊಡವೂರು: ನಿರ್ಮಾಣ ಹಂತದ ಬಾವಿ ಕುಸಿದು ಕಾರ್ಮಿಕ ಸಾವು

ಕೊಡವೂರು: ನಿರ್ಮಾಣ ಹಂತದ ಬಾವಿ ಕುಸಿದು ಕಾರ್ಮಿಕ ಸಾವು

Date:

ಉಡುಪಿ, ಮೇ 22: ಕೊಡವೂರು ಸಮೀಪದ ಗರಡಿಮಜಲು ಎಂಬಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಇನ್ನೋರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆದಿದೆ. ಮೃತಪಟ್ಟ ಕಾರ್ಮಿಕ ಕೊಪ್ಪಳ ಜಿಲ್ಲೆಯ ರಮೇಶ್ (25) ಎಂದು ಗುರುತಿಸಲಾಗಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ನೆರವಾದರು. ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ನಗರಸಭಾ ಸದಸ್ಯರಾದ ವಿಜಯ ಕೊಡವೂರು ಮುಂತಾದವರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!