Saturday, October 17, 2026
Saturday, October 17, 2026

ಮೇ 27: ಪುಷ್ಪಾನಂದ ಫೌಂಡೇಶನ್ ವತಿಯಿಂದ ಶೇ 100 ಫಲಿತಾಂಶ ಬಂದ ಉಡುಪಿ ಕ್ಷೇತ್ರದ ಶಾಲೆ ಹಾಗೂ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ: ಯಶ್ಪಾಲ್ ಸುವರ್ಣ

ಮೇ 27: ಪುಷ್ಪಾನಂದ ಫೌಂಡೇಶನ್ ವತಿಯಿಂದ ಶೇ 100 ಫಲಿತಾಂಶ ಬಂದ ಉಡುಪಿ ಕ್ಷೇತ್ರದ ಶಾಲೆ ಹಾಗೂ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ: ಯಶ್ಪಾಲ್ ಸುವರ್ಣ

Date:

ಉಡುಪಿ, ಮೇ 25: ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 27 ರಂದು ಸಂಜೆ 3.30ಕ್ಕೆ ಉಡುಪಿ ಬೀಡಿನಗುಡ್ಡೆ ರಸ್ತೆಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ ಆಡಿಟೋರಿಯಂನಲ್ಲಿ 2025-26 ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಬಂದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಲಾ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಿರುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಪುಷ್ಪಾನಂದ ಫೌಂಡೇಶನ್ ವತಿಯಿಂದ ನೂರು ಶೇಕಡಾ ಫಲಿತಾಂಶ ಬಂದ 41 ಶಾಲಾ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಗುವುದು.

ಸಮಾರಂಭದಲ್ಲಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ವಿಶೇಷ ಮುತುವರ್ಜಿ ವಹಿಸಿದ ಶಿಕ್ಷಣ ಇಲಾಖೆಯ ಪರವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು ಎಂದು ಶಾಸಕ ಯಶ್ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!