Sunday, October 18, 2026
Sunday, October 18, 2026

ಜ್ಞಾನದ ದಿಗಂತವನ್ನು ವಿಸ್ತರಿಸಿದವರು ಕಾರಂತರು: ಡಾ. ವರದರಾಜ್ ಚಂದ್ರಗಿರಿ

ಜ್ಞಾನದ ದಿಗಂತವನ್ನು ವಿಸ್ತರಿಸಿದವರು ಕಾರಂತರು: ಡಾ. ವರದರಾಜ್ ಚಂದ್ರಗಿರಿ

Date:

ಉಡುಪಿ, ಮೇ 26: ಪ್ರಾಯೋಗಶೀಲತೆಯ ಮೂಲಕ ಸಾಹಿತ್ಯ ಮತ್ತು ಸಾಮಾಜಿಕ ವಲಯದಲ್ಲಿ ಕಾರ್ಯನಿರ್ವಹಿಸಿ ಕಾರಂತರು, ಯಕ್ಷಗಾನಕ್ಕೆ ಜಾಗತಿಕ ಮನ್ನಣೆಯನ್ನು ದೊರಕಿಸಿಕೊಟ್ಟವರು. ಪ್ರತಿಯೊಂದು ಕ್ಷೇತ್ರಕ್ಕೂ ಸಹ ತಮ್ಮದೇ ಕೊಡುಗೆ ನೀಡಿದ ಅವರು ಜ್ಞಾನದ ದಿಗಂತವನ್ನು ವಿಸ್ತರಿಸಿದರು ಎಂದು ಚಿಂತಕ ಡಾ. ವರದರಾಜ್ ಚಂದ್ರಗಿರಿ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-15 ಕಾರ್ಯಕ್ರಮದಲ್ಲಿ ಕಾರಂತರ ಕಾದಂಬರಿಗಳಲ್ಲಿ ವೈಚಾರಿಕ ಚಿಂತನೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಉದ್ಘಾಟಿಸಿ ಮಾತನಾಡಿ, ಕಾರಂತರ ಕಾದಂಬರಿ ಮಾತ್ರವಲ್ಲದೇ ಅವರ ಪ್ರತಿಯೊಂದು ಸಾಹಿತ್ಯ ಪ್ರಕಾರವು ವೈಚಾರಿಕ ಚಿಂತನೆಯನ್ನು ಹೊಂದಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಅವರ ಕೊಡುಗೆ ಅಪಾರವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು, ಜ್ಞಾನವೆಂಬುದು ಬಹುಮುಖಿಯಾದದ್ದು, ಎಲ್ಲಾ ವಿಚಾರಗಳ ಬಗೆಗೆ ಅರಿತಾಗ ಚಿಂತನ ಕ್ರಮದಲ್ಲಿ ಬದಲಾವಣೆಯಾಗುತ್ತದೆ. ವಿದ್ಯಾರ್ಥಿ ಹೊಸ ಹೊಸ ವಿಚಾರಗಳ ಅರಿಯುವ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಜೀವನ್ ನಿರೂಪಿಸಿ, ಐ.ಕ್ಯೂ.ಎ.ಸಿ ಸಂಚಾಲಕ ಪುಪ್ಪರಾಜ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!