Friday, October 16, 2026
Friday, October 16, 2026

ಪಲಿಮಾರು: ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಪಲಿಮಾರು: ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Date:

ಕಾಪು, ಮೇ 26: ಸರಕಾರಿ ಪದವಿಪೂರ್ವ ಕಾಲೇಜು ಪಲಿಮಾರು ಇದರ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಖಡಾ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಮಂಗಳವಾರ ಅಭಿನಂದನಾ ಸಮಾರಂಭ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಇಂಟರ್ ಲಾಕ್ ಕಾಮಗಾರಿ ಹಾಗೂ ಶಾಲೆಯ ಮೂಲಭೂತ ಸೌಕರ್ಯಗಳನ್ನು ಶಾಸಕರು ಉದ್ಘಾಟಿಸಿದರು.

ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸೌಮಲತಾ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ರಾಯೇಶ್ ಪೈ, ಮಾಜಿ ಸದಸ್ಯರಾದ ಗಾಯತ್ರಿ ಪ್ರಭು, ಪ್ರವೀಣ್ ಪೂಜಾರಿ, ಸುಜಾತಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಪ್ರಾಂಶುಪಾಲರಾದ ಗ್ರೇಟ್ಟಾ ಡಿ’ಸೋಜಾ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಮಾಧವ ಸಾಲ್ಯಾನ್, ಹಳೆ ವಿದ್ಯಾರ್ಥಿ ದಾನಿಗಳಾದ ಪ್ರಭಾ ನಂಬಿಯಾರ್ ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!