Saturday, September 12, 2026
Saturday, September 12, 2026

ಕಾಪು: ಹೆಚ್ಚುತ್ತಿರುವ ಅಪಘಾತಗಳು; ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಸೂಚನೆ

ಕಾಪು: ಹೆಚ್ಚುತ್ತಿರುವ ಅಪಘಾತಗಳು; ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಸೂಚನೆ

Date:

ಕಾಪು, ಮೇ 26: ಕಾಪು ಪುರಸಭಾ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿದ್ದು ಈ ಸಂಬಂಧ ಮಂಗಳವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಶೀಘ್ರವೇ ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಮತ್ತು ಬೀದಿ ದೀಪ ಮತ್ತು ಚರಂಡಿಗಳ ದುರಸ್ತಿಗೊಳಿಸುವಂತೆ ಸಂಭಂದಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ ಕಾಪು ಪುರಸಭೆಯ ಸದಸ್ಯರು, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಸಂತೋಷ ಶೆಟ್ಟಿ, ಕಾಪು ಪೋಲಿಸ್ ಉಪ ನಿರೀಕ್ಷಕರಾದ ತೇಜಸ್ವಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ವಿಘ್ನೇಶ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!