Monday, August 31, 2026
Monday, August 31, 2026

ಶೇ.100 ಫಲಿತಾಂಶ ದಾಖಲಿಸಿದ ಶಾಲಾ ಕಾಲೇಜುಗಳಿಗೆ ಗೌರವಾರ್ಪಣೆ

ಶೇ.100 ಫಲಿತಾಂಶ ದಾಖಲಿಸಿದ ಶಾಲಾ ಕಾಲೇಜುಗಳಿಗೆ ಗೌರವಾರ್ಪಣೆ

Date:

ಉಡುಪಿ, ಮೇ 28: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಬಂದ 41 ಶಾಲಾ ಕಾಲೇಜುಗಳಿಗೆ ಅಭಿನಂದನಾ ಸಮಾರಂಭ ಬೀಡಿನಗುಡ್ಡೆಯ ಯಕ್ಷಗಾನ ಕಲಾರಂಗ ಆಡಿಟೋರಿಯಂನಲ್ಲಿ ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ರಾಮಕೃಷ್ಣ ಆಶ್ರಮ ತುಮಕೂರಿನ ಶ್ರೀ ಎಸ್ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ ಉತ್ತಮ ಸಂಸ್ಕಾರ ಹಾಗೂ ಮೌಲ್ಯಾಧಾರಿತ ಆದರ್ಶವ್ಯಕ್ತಿತ್ವ ರೂಪಿಸುವ ಏಕೈಕ ವೃತ್ತಿ ಶಿಕ್ಷಕ ವೃತ್ತಿಯಾಗಿದ್ದು, ಮೌಲ್ಯಾಧಾರಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದ್ದು ಇಂದಿನ ಸಮಾಜದಲ್ಲಿ ಶೈಕ್ಷಣಿಕವಾಗಿ ಉತ್ತಮ ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಸಂಕಲ್ಪ ಮಾಡಬೇಕಿದೆ ಎಂದರು.

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಶಾಸಕ ಯಶ್ಪಾಲ್ ಸುವರ್ಣ ರವರ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡುತ್ತಾ, ಶೈಕ್ಷಣಿಕ ಸಾಧನೆಯ ಮೂಲಕ ರಾಷ್ಟ್ರಕ್ಕೆ ಮಾದರಿಯಾಗಿರುವ ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಗದು ಪುರಸ್ಕಾರದೊಂದಿಗೆ ನೂರು ಶೇಕಡ ಫಲಿತಾಂಶ ಬಂದ 41 ಶಾಲೆಗಳಿಗೆ ಫೌಂಡೇಶನ್ ವತಿಯಿಂದ ಗೌರವಿಸುತ್ತಿರುವುದು ಸಂತಸ ತಂದಿದೆ. ನರೇಂದ್ರ ಮೋದಿಯವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ಸಾಕಾರಕ್ಕೆ ಉಡುಪಿಯ ಶೈಕ್ಷಣಿಕ ಸಾಧನೆಯ ಮೂಲಕ ಮತ್ತಷ್ಟು ಶಕ್ತಿ ತುಂಬಿದೆ ಎಂದು ಹೇಳಿದರು.

ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ವಿಶೇಷ ಮುತುವರ್ಜಿ ವಹಿಸಿದ ಶಿಕ್ಷಣ ಇಲಾಖೆಯ ಪರವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಲೋಕೇಶ್, ಮಾರುತಿ, ಡಯಟ್ ಪ್ರಾಂಶುಪಾಲರಾದ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಉಮಾ ರವರನ್ನು ಅಭಿನಂದಿಸಲಾಯಿತು.

ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಕುಮಾರಿ ಕಲ್ಯಾಣಿ, ಅಶ್ವಿತ ಹಾಗೂ ನಿಶಲ್ ಪೂಜಾರಿ ಹಾಗೂ 100% ಫಲಿತಾಂಶ ಬಂದ ಶಾಲಾ ಕಾಲೇಜುಗಳಿಗೆ ನಗದು ಪುರಸ್ಕಾರ ಸಹಿತ ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಹಾಗೂ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ಸ್ವಾಗತಿಸಿ, ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!