Friday, July 24, 2026
Friday, July 24, 2026

ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 19.23 ಲಕ್ಷ ರೂ. ವಿದ್ಯಾರ್ಥಿವೇತನ

ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 19.23 ಲಕ್ಷ ರೂ. ವಿದ್ಯಾರ್ಥಿವೇತನ

Date:

ಉಡುಪಿ, ಮೇ 28: ನಮ್ಮಲ್ಲಿರುವ ವಿಶೇಷತೆಯನ್ನು ಅರಿತು, ಜ್ಞಾನದ ಜೊತೆಗೆ ಸಾಗಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಬಲ ನಮ್ಮಲ್ಲಿರಬೇಕು. ವೈಯಕ್ತಿಕ ಹಿತಾಸಕ್ತಿಗಿಂತ ಹೆತ್ತವರ ಆಸೆ ಆಕಾಂಕ್ಷೆಗಳಿಗೆ ಬೆಲೆಕೊಟ್ಟವರು ಎಂದೂ ಸೋಲುವುದಿಲ್ಲ. ಜ್ಞಾನಸುಧಾದಲ್ಲಿರುವ ವಿವಿಧ ರೀತಿಯ ವಿದ್ಯಾರ್ಥಿ ವೇತನದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಇವರು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನಲ್ಲಿ ಆಯೋಜಿಸಿದ ಪ್ರಾರಂಭೊತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ದಿನೇಶ್ ಎಂ ಕೊಡವೂರು ಮಾತನಾಡಿ ನಮ್ಮ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರ ಜೀವನವೇ ನಮಗೆ ಆದರ್ಶ. ಅವರ ಮಾರ್ಗದರ್ಶನದಂತೆ ನಾಲ್ಕು ಸಂಸ್ಥೆಗಳು ಒಟ್ಟಾಗಿ ದುಡಿಯಲಿದೆ ಎಂದರು. ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ. ಮಿಥುನ್ ಯು ಮಾತನಾಡಿ ಎರಡು ವರ್ಷಗಳ ಶೈಕ್ಷಣಿಕ ಚಟುವಟಿಕೆಗಳು ಸಾಗುವ ಬಗೆಯನ್ನು ವಿವರಿಸಿದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಉಡುಪಿ ಜ್ಞಾನಸುಧಾ ಕಾಲೇಜಿಗೆ ದಾಖಲಾತಿ ಹೊಂದಿದ ೪೭ ಅರ್ಹ ವಿದ್ಯಾರ್ಥಿಗಳಿಗೆ 19.23 ಲಕ್ಷ ರೂ. ವಿದ್ಯಾರ್ಥಿವೇತನ ನೀಡಲಾಯಿತು. ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿಧಿ ಭಾಗವತ್‌ರವರು ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಅಜೆಕಾರು ಜ್ಞಾನಸುಧಾದ ಪ್ರಾಂಶುಪಾಲರಾದ ಸಂತೋಷ್, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಕೊಆರ್ಡಿನೇಟರ್ ಆಗಿರುವ ಸಂದೀಪ್ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥರಾದ ಕೀರ್ತಿ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!