Monday, August 31, 2026
Monday, August 31, 2026

ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜು ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜು ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

Date:

ಮಣಿಪಾಲ, ಮೇ 29: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ 28 ರಂದು ನಡೆಯಿತು. ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಉತ್ತಮ ಸ್ನೇಹಿತರ ಪಾತ್ರ ಮಹತ್ವವಾದುದು, ಜ್ಞಾನಸುಧಾ ಕೊಡಮಾಡುವ ಮೌಲ್ಯಯುತ ಶಿಕ್ಷಣದ ಸದ್ಬಳಕೆ ಮಾಡಿ ವಿದ್ಯಾರ್ಥಿಗಳು ಪೋಷಕರಿಗೆ ಶೈಕ್ಷಣಿಕ ಸಾಧನೆಯ ಉಡುಗೊರೆ ಕೊಡಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ಮಾತನಾಡಿ ಎರಡು ವರ್ಷಗಳ ಶೈಕ್ಷಣಿಕ ಚಟುವಟಿಕೆಗಳು ಸಾಗುವ ಬಗೆಯನ್ನು ವಿವರಿಸಿದರು. ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಕೋಆರ್ಡಿನೇಟರ್ ಆಗಿರುವ ಸಂದೀಪ್ ಇವರು ಮಾತನಾಡಿ ವಿವಿಧ ಪ್ರವೇಶ ಪರೀಕ್ಷೆಗಳ ತರಬೇತಿಯ ಬಗ್ಗೆ ಮಾಹಿತಿ ನೀಡಿದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಮಣಿಪಾಲ ಜ್ಞಾನಸುಧಾ ಕಾಲೇಜಿಗೆ ದಾಖಲಾತಿ ಹೊಂದಿದ ಅರ್ಹ 73 ವಿದ್ಯಾರ್ಥಿಗಳಿಗೆ 29.88 ಲಕ್ಷ ವಿದ್ಯಾರ್ಥಿವೇತನ ನೀಡಲಾಯಿತು. ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು., ಉಪಪ್ರಾಂಶುಪಾಲರುಗಳಾದ ರವಿ ಜಿ., ಹೇಮಂತ್ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!