Monday, September 28, 2026
Monday, September 28, 2026

ಬದಲಾವಣೆಗೆ ಒಗ್ಗಿಕೊಳ್ಳದ ಮನಸ್ಸುಗಳು ಕಾಲದ ಜೊತೆಗೆ ಹೋರಾಡಲಾರವು: ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ

ಬದಲಾವಣೆಗೆ ಒಗ್ಗಿಕೊಳ್ಳದ ಮನಸ್ಸುಗಳು ಕಾಲದ ಜೊತೆಗೆ ಹೋರಾಡಲಾರವು: ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ

Date:

ಹಿರಿಯಡಕ, ಮೇ 30: ಹೊಸತನಕ್ಕೆ ಒಗ್ಗಿಕೊಳ್ಳುತ್ತಾ ಹೊಸ ಕಲಿಕೆಯೊಂದಿಗೆ ಕಾಲದ ಸವಾಲುಗಳನ್ನು ಎದುರಿಸಲು ಬದಲಾವಣೆಗೆ ಒಗ್ಗಿಕೊಳ್ಳದೇ ಇದ್ದರೆ ಕಾಲದ ಜೊತೆಗೆ ಹೋರಾಡಿ ಗೆಲ್ಲುವ ಅವಕಾಶಗಳಿಂದ ಯುವಸಮುದಾಯ ವಂಚಿತವಾಗುವ ಅಪಾಯವಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ ಎಚ್ಚರಿಸಿದರು. ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಇವರು ಅವಮಾನ, ಸವಾಲುಗಳನ್ನು ಒಡ್ಡುವ ಬದುಕಿನ ಸಂಕಟಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದವರಿಗೆ ಸನ್ಮಾನವು ತಾನಾಗಿಯೇ ಒದಗಿಬರುತ್ತದೆ ಎಂದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಸಂಚಾಲಕಿ ಡಾ. ಸೌಮ್ಯಲತಾ ಪಿ ಇವರು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌., ವಸಂತ ಶೆಟ್ಟಿ ಚೆನ್ನಿಬೆಟ್ಟು, ಉಮೇಶ್‌ ಶೆಟ್ಟಿ, ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ ಎಂ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಈರಬಸು, ಉಪಾಧ್ಯಕ್ಷೆ ವೈಷ್ಣವಿ ಹಾಗೂ ಇತರ ಪದಾಧಿಕಾರಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಡಾ. ಡಿ.ಎಸ್‌. ದೊಡ್ಡಮನಿ ಸ್ವಾಗತಿಸಿ, ಪ್ರಣೀತ ವಂದಿಸಿದರು, ನಿಶ್ಚಿತ ಎಸ್‌ ಹೋಬಳಿದಾರ್‌ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!