Saturday, August 29, 2026
Saturday, August 29, 2026

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮಾಳ-ತನಿಕೋಡು ಗೇಟ್ ರಸ್ತೆ ಪರಿಶೀಲನೆ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮಾಳ-ತನಿಕೋಡು ಗೇಟ್ ರಸ್ತೆ ಪರಿಶೀಲನೆ

Date:

ಕಾರ್ಕಳ, ಮೇ 31: ಕಾರ್ಕಳ ತಾಲೂಕಿನ, ಮಾಳ ಗೇಟಿನಿಂದ ಎಸ್.ಕೆ ಬಾರ್ಡರ್ ಮೂಲಕ ಶೃಂಗೇರಿಯ ತನಿಕೋಡು ಗೇಟ್ ವರೆಗಿನ 29 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಚರ್ಚಿಸಿದರು. ಬಳಿಕ ಮಾತನಾಡಿದ ಅವರು, ಹೆದ್ದಾರಿ ಅಭಿವೃದ್ಧಿಗೆ 550 ಕೋಟಿ ರೂಪಾಯಿ ಪ್ರಸ್ತಾಪನೆ ಕೇಂದ್ರ ಸರ್ಕಾರದ ಮುಂದಿದೆ. ಮಾಳ ಗೇಟ್ ಆರಂಭದಿಂದ ಇಕ್ಕೆಲಗಳಲ್ಲಿ ಬರುವ ಅರಣ್ಯ ತೆರವುಗೊಳಿಸಲು ಕಂದಾಯ ಇಲಾಖೆ ಮೂಲಕ ಅರಣ್ಯ ಇಲಾಖೆಗೆ 50 ಎಕರೆ ಭೂಮಿಯನ್ನು ವರ್ಗಾಯಿಸಬೇಕಾಗಿದ್ದು ಕಡತ ವಿಲೇವಾರಿಗಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಲು ಸಮಯ ನಿಗಧಿಕರಿಸಲಾಗಿದೆ.

ಇಲಾಖೆಯ ಮಾಹಿತಿಯ ಪ್ರಕಾರ ಹಿಂದೆ ಗುಲಗುಂಜಿ ಮನೆ, ಕೊರ್ಕನಹಳ್ಳಿ ಸಹಿತ ಮೂರು ಸೇತುವೆಗಳು ಮಂಜೂರಾಗಿದ್ದರೂ ಅರಣ್ಯ ಇಲಾಖೆಯ ಅನುಮತಿ ಸಿಗದೇ ರದ್ದಾಗಿದ್ದವು. ಅನುಮತಿ ನಿರೀಕ್ಷಿಸಿ ರಸ್ತೆಯ ಇಕ್ಕೆಲಗಳಲ್ಲಿ ಗಡಿ ಗುರುತು ಮಾಡಲು ಸೂಚನೆ ನೀಡಿದ್ದೆ. ಪ್ರಯತ್ನ ಸಫಲವಾಗಿ ಕಂದಾಯ ಇಲಾಖೆ ಪ್ರಸ್ತಾಪಿತ ಭೂಮಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದರೆ 1999 ರಿಂದ ಅಂದರೆ ಸುಮಾರು 25 ವರ್ಷದಿಂದ ನೆನೆಗುದಿಗೆ ಬಿದ್ದ ಮಾಳ-ತನಿಕೋಡು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಚಾಲನೆ ಸಿಗಲಿದೆ.
ರಾ.ಹೆ. ಇಲಾಖೆಯ ನವೀನ್ ರಾಜ್, ಅರಣ್ಯ ಇಲಾಖೆ ಅರುಣ್, ಸತೀಶ್ ನಾಯಕ್, ಸುಬ್ರಹ್ಮಣ್ಯ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!