Saturday, August 29, 2026
Saturday, August 29, 2026

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

Date:

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ ತ್ರಿಶಾ ಕ್ಲಾಸಸ್ ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ ನಡೆಯಿತು. ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅವರು ಉದ್ಘಾಟಿಸಿ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಅವಿರತವಾದ ಓದಿಗೆ ಖಂಡಿತವಾಗಿಯೂ ಫಲ ದೊರಕುತ್ತದೆ. ವಿದ್ಯಾರ್ಥಿಗಳು ಗುರಿಯನ್ನು ನಿರ್ಧರಿಸಿಕೊಂಡು ಅದರ ಕಡೆಗೆ ಮುನ್ನಡೆದಾಗ ಮಾತ್ರ ಗೆಲುವು ಸಾಧ್ಯವಾಗುತ್ತದೆ ಎಂದರು. ಸಿಎ ಫೌಂಡೇಶನ್ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಮಧ್ಯಾಹ್ನ ನಡೆದ ಸಿಎಸ್‌ಇಇಟಿ ಮಾಹಿತಿ ಕಾರ್ಯಾಗಾರವನ್ನು ಪ್ರೊ. ರಾಜ್ ಗಣೇಶ್ ಕಾಮತ್ ಅವರು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡುತ್ತಾ ಕನಸುಗಳಿಗೆ ಪರಿಧಿಗಳನ್ನ ಹಾಕಿಕೊಳ್ಳದೆ ಹೆಜ್ಜೆಗಳನ್ನು ಮುಂದಿಡಬೇಕು ದೃಢ ವಿಶ್ವಾಸ ಮತ್ತು ನಂಬಿಕೆಗಳು ಮಾತ್ರ ವಿದ್ಯಾರ್ಥಿಯನ್ನು ಯಶಸ್ಸಿನ ಕಡೆಗೆ ಕೊಂಡೊಯ್ಯುತ್ತದೆ ಎಂದರು.

ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ವಿಘ್ನೇಶ್ ಶೆಣೈ, ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಲದೀಪ್ ಉಪಸ್ಥಿತರಿದ್ದರು. ಸಿ.ಎ ಸಿಎಸ್ ಇಇಟಿ ತರಗತಿ ಮತ್ತು ಪರೀಕ್ಷೆ ನಡೆಯುವ ವಿಧಾನ ವಿದ್ಯಾರ್ಥಿಗಳ ಅಭ್ಯಾಸ ಮಾರ್ಗದರ್ಶಿಕೆ ವೇಳಾಪಟ್ಟಿ ಅಣುಕು ಪರೀಕ್ಷೆ ಈ ಎಲ್ಲದರ ಕುರಿತು ಸಮಗ್ರ ಮಾಹಿತಿಯನ್ನು ನೀಡಲಾಯಿತು. 250ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಪ್ರಜ್ಞಾ ನಿರೂಪಿಸಿ, ಸ್ವಾಗತಿಸಿ,ವಂದಿಸಿದರು. ತ್ರಿಶಾ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!