Saturday, October 17, 2026
Saturday, October 17, 2026

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

Date:

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು ಬೆಳಸಿಕೊಳ್ಳುವ ಮೂಲಕ ಅವಕಾಶವನ್ನು ಸೃಷ್ಟಿಸಿಕೊಳ್ಳಿ ಆಮುಖೇನ ಸಮಾಜಕ್ಕೆ ಕೊಡುಗೆಯನ್ನು ನೀಡಿ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರಿನ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ನಿಕಾಯಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್, ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಶುಭ ಹಾರೈಸಿದರು. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕಾವ್ಯ, ಶ್ರೇಯಾ, ಆಕಾಶ್ ಬಿ. ಶೆಟ್ಟಿ, ರಶ್ಮಿ, ಗೌತಮಿ, ಐಶ್ವರ್ಯ, ನಿರೀಕ್ಷಾ, ವಿಶ್ವನಾಥ್ ಅನಿಸಿಕೆ ಹಂಚಿಕೊಂಡರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರವೀಣಾ ಎಮ್. ಪೂಜಾರಿ ಅತಿಥಿಗಳನ್ನು ಪರಿಚಯಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!