Tuesday, July 28, 2026
Tuesday, July 28, 2026

ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ

ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ

Date:

ಕುಂದಾಪುರ, ಜೂ.2: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್, ಮ್ಯಾನೇಜ್‌ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು. ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಅವರು ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು ವಿವಿಧ ಹಂತಗಳ ಸಂಸ್ಕರಣೆಗೆ ಹೇಗೆ ಒಳಪಡಿಸಲಾಗುತ್ತದೆ, ಗುಣಮಟ್ಟದ ಆಧಾರದ ಮೇಲೆ ಹೇಗೆ ವಿಂಗಡಿಸಲಾಗುತ್ತದೆ ಹಾಗೂ ಅಂತಿಮವಾಗಿ ಉತ್ತಮ ಗುಣಮಟ್ಟದ ಉತ್ಪನ್ನವಾಗಿ ಹೇಗೆ ತಯಾರಿಸಲಾಗುತ್ತದೆ ಎಂಬುದನ್ನು ವಿವರಿಸಿದರು.

ಕೈಗಾರಿಕಾ ಭೇಟಿಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಿ ಹೆಗ್ಡೆ, ಸತೀಶ್ ಶೆಟ್ಟಿ, ರಜತ್ ಬಂಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!