Tuesday, July 28, 2026
Tuesday, July 28, 2026

ತ್ರಿಶಾ ವಿದ್ಯಾ ಕಾಲೇಜು: ವಾರ್ಷಿಕೋತ್ಸವ

ತ್ರಿಶಾ ವಿದ್ಯಾ ಕಾಲೇಜು: ವಾರ್ಷಿಕೋತ್ಸವ

Date:

ಉಡುಪಿ, ಜೂ.2: ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಮತ್ತು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಯುವ ಉಧ್ಯಮಿ ಹಂಗ್ರೀ ಶಾರ್ಕ್ ಮೀಡಿಯಾ ಸಂಸ್ಥಾಪಕ ಯುದಿಸ್ಟಿರ್ ನಾರಾಯಣ್ ಮಾತನಾಡಿ, ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವುದು ತುಂಬಾ ಸಂತಸ ತಂದಿದೆ ಅದರ ಜೊತೆಗೆ ವೈಯಕ್ತಿಕವಾಗಿ ಸ್ವಂತ ಉದ್ಯೋಗವನ್ನು ಸ್ಥಾಪಿಸಿ ಒಂದಷ್ಟು ಜನರಿಗೆ ಉದ್ಯೋಗ ನೀಡುವ ವಿದ್ಯಾರ್ಥಿಗಳಾಗಬೇಕು. ಈ ದೇಶಕ್ಕೆ ನಮ್ಮದಾದ ಕೊಡುಗೆಯನ್ನು ನೀಡುವ ವ್ಯಕ್ತಿಗಳಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರದರ್ಶಿಸಲು ಇಂತಹ ವೇದಿಕೆಗಳನ್ನ ಬಳಸಿಕೊಳ್ಳಬೇಕು ವಿದ್ಯಾರ್ಥಿಗಳ ಹೊಸ ಆಲೋಚನೆಗಳಿಗೆ ವಿಭಿನ್ನವಾದ ನಿಲುವುಗಳಿಗೆ ಸಂಸ್ಥೆ ಸದಾ ಬೆನ್ನೆಲುಬಾಗಿ ನಿಂತಿರುತ್ತದೆ ಎಂದರು. 

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲ ಪ್ರೊ ವಿಘ್ನೇಶ್ ಶೆಣೈ ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ‌ ವಾರ್ಷಿಕ ಪತ್ರಿಕೆ ಅಂಕುರ ಬಿಡುಗಡೆ ಮಾಡಲಾಯಿತು ಸಿದ್ಧಾಂತ್  ಫೌಂಡೇಶನ್ ಟ್ರಸ್ಟಿ, ನಮಿತಾ ಜಿ ಭಟ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ಕುಲದೀಪ್ ಯು ವೈ, ವಿದ್ಯಾರ್ಥಿ ನಾಯಕ ನಂದೀಶ್ ಉಪಸ್ಥಿತರಿದ್ದರು. ಪ್ರತಿಭಾ ಪುರಸ್ಕಾರದ ಪಟ್ಟಿಯನ್ನು ಚೇತನ ಸುನಿಲ್, ತ್ರಿಶಾ ಕ್ಲಾಸ್ ನ ವರದಿ ವಾರ್ಷಿಕ ವರದಿಯನ್ನು ಗೌರಿ ಕಾಮತ್ ವಾಚಿಸಿದರು. ಕ್ರೀಡಾ ಕ್ಷೇತ್ರದ ಬಹುಮಾನಗಳ ಪಟ್ಟಿಯನ್ನು ಶಶಿಕಿರಣ್ ವಾಚಿಸಿದರು. ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಶ್ರೀ ಸ್ವಾಗತಿಸಿ ಪ್ರಾಂಶುಪಾಲ ಡಾ. ಕುಲದೀಪ್ ವಂದಿಸಿದರು. ಅಂತಿಮ ವರ್ಷದಲ್ಲಿ ಉತ್ತಮ ಅಂಕ ಗಳಿಸಿದ ಹಿರಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಪ್ರಾಧ್ಯಾಪಿಕೆ ಶಿಲ್ಪಾ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!