Saturday, July 25, 2026
Saturday, July 25, 2026

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಷಯ ಆಯ್ಕೆ ಕುರಿತು ಉಪನ್ಯಾಸ

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಷಯ ಆಯ್ಕೆ ಕುರಿತು ಉಪನ್ಯಾಸ

Date:

ಮಲ್ಪೆ, ಜೂ.3: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಸ್ನಾತಕೋತ್ತರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಯುಕ್ತ ಆಶ್ರಯದಲ್ಲಿ ಸಂಶೋಧನಾ ಕಲ್ಪನೆಯಿಂದ ಸಂಶೋಧನಾ ವಿಷಯದವರೆಗೆ: ಪರಿಣಾಮಕಾರಿ ವಿಷಯ ಆಯ್ಕೆಯ ತಂತ್ರಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜೂನ್ 2 ರಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರೊ. ಬಿಂದು ಟಿ., ಸಹಾಯಕ ಪ್ರಾಧ್ಯಾಪಕರಾದ ಮರ್ವಿನ್ ಡಿಸೋಜಾ, ಉಪನ್ಯಾಸಕರಾದ ಸ್ಮಿತಾ ಹಾಗೂ ನಾಗಲಕ್ಷ್ಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಬಾಲರಾಜ್ ಡಿ. ಬಿ. ಭಾಗವಹಿಸಿ, ಸಂಶೋಧನಾ ವಿಷಯವನ್ನು ಆಯ್ಕೆ ಮಾಡುವಲ್ಲಿ ಅನುಸರಿಸಬೇಕಾದ ವಿಧಾನಗಳು, ಉತ್ತಮ ಸಂಶೋಧನಾ ವಿಷಯದ ಲಕ್ಷಣಗಳು, ಸಾಹಿತ್ಯ ಸಮೀಕ್ಷೆಯ ಮಹತ್ವ ಹಾಗೂ ಸಂಶೋಧನಾ ಕ್ಷೇತ್ರದಲ್ಲಿನ ಹೊಸ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಸಮರ್ಪಕ ಉತ್ತರಗಳನ್ನು ನೀಡಿದರು. ಪ್ರಥಮ ಎಂ.ಕಾಂ ವಿದ್ಯಾರ್ಥಿಗಳಾದ ಸ್ನೇಹಾ ಮತ್ತು ತಂಡ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವಿನಾಶ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಪ್ರಜ್ವಲ್ ಸ್ವಾಗತಿಸಿ, ಪ್ರತೀಕ್ಷಾಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪೂಜಾ ವಂದಿಸಿದರು. ಎಂ.ಕಾಂ ಸಂಯೋಜಕರಾದ ಡಾ. ದತ್ತ ಕುಮಾರ್ ಕಾರ್ಯಕ್ರಮ ಸಂಘಟಿಸಿದರು. ಎಂ.ಕಾಂ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!