Tuesday, October 6, 2026
Tuesday, October 6, 2026

ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

Date:

ಕುಂದಾಪುರ, ಜೂ.3: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ ‘ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ’ ಕಾರ್ಯಕ್ರಮ ಜೂನ್ 2ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಯು. ಸಿ. ನಿರಂಜನ್, ಡಾ. ಮುರಳಿಕೃಷ್ಣ ಎಸ್. ಎನ್., ಶಶಿಧರ್ ಶೆಟ್ಟಿ, ಡಾ. ಅಂಜಯ್ಯ ದೇವಿನೇನಿ ಹಾಗೂ ಶ್ರೀಮತಿ ರಾಜಲಕ್ಷ್ಮಿ ಆನಂದನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅತಿಥಿಗಳು ತಂತ್ರಜ್ಞಾನದ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ, ನವೀನತೆ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ನಿರಂತರವಾಗಿ ತಮ್ಮ ಜ್ಞಾನವನ್ನು ನವೀಕರಿಸಿಕೊಂಡು ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದರು. ವಿದ್ಯಾರ್ಥಿಗಳು ನವೀನ ಯೋಜನೆಗಳ ಮೂಲಕ ಸಮಾಜಕ್ಕೆ ಉಪಯುಕ್ತವಾದ ಪರಿಹಾರಗಳನ್ನು ನೀಡುವಂತೆ ಕರೆ ನೀಡಿದರು.

ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ರಶ್ಮಿತಾ, ಅಪೂರ್ವ, ಸಿಂಚನಾ, ನಾಗಶ್ರೀ, ಅನುಶ್ರೀ ಶೆಟ್ಟಿ ಹಾಗೂ ಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಸಾನಿಕಾ ವಂದಿಸಿದರು. ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನವೀನ ಯೋಜನೆಗಳ ಪ್ರಸ್ತುತಿ ಗಮನ ಸೆಳೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!