Sunday, September 13, 2026
Sunday, September 13, 2026

ಕುಂದಾಪುರ: ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ

ಕುಂದಾಪುರ: ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ

Date:

ಉಡುಪಿ, ಜೂ.3: ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯನಿರ್ವಹಿಸುವ ಹೆಲ್ಪ್ಲೈನ್ ಕೇಂದ್ರವನ್ನು ತೆರೆಯಲಾಗಿದ್ದು, ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಹೆಲ್ಪ್ಲೈನ್ ಸಂಖ್ಯೆ :08254-230410 ಗೆ ಕರೆ ಮಾಡಬಹುದಾಗಿದೆ. ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು: ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು – ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ ಪಡೆಯಬಾರದು. ವಿದ್ಯುತ್ ಕಂಬಗಳಿಂದ ಎಚ್ಚರ – ರಸ್ತೆ ಬದಿಯ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್‌ಗಳು ಹಾಗೂ ಜೋತಾಡುವ ವಿದ್ಯುತ್ ತಂತಿಗಳನ್ನು ಮುಟ್ಟಬಾರದು. ಮರಗಳ ಕೆಳಗೆ ನಿಲ್ಲಬಾರದು – ಬಿರುಗಾಳಿ ಸಹಿತ ಭಾರಿ ಮಳೆ ಬರುವಾಗ ದೊಡ್ಡ ಮರಗಳು ಅಥವಾ ಜಾಹೀರಾತು ಫಲಕಗಳ (ಹೋರ್ಡಿಂಗ್ಸ್) ಕೆಳಗೆ ವಾಹನ ನಿಲ್ಲಿಸುವುದನ್ನು ತಪ್ಪಿಸಬೇಕು. ತ್ಯಾಜ್ಯ ವಿಲೇವಾರಿ – ಒಣ ಮತ್ತು ಹಸಿ ಕಸವನ್ನು ಚರಂಡಿಗಳಿಗೆ ಎಸೆಯಬಾರದು. ಇದು ಚರಂಡಿ ಬ್ಲಾಕ್ ಆಗಿ ನೀರು ರಸ್ತೆಗೆ ನುಗ್ಗಲು ಕಾರಣವಾಗುತ್ತದೆ.

ಮಳೆಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಎದುರಾದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮೊ. ಸಂಖ್ಯೆ :9880034793, ಪರಿಸರ ಅಭಿಯಂತರು ಮೊ ಸಂಖ್ಯೆ : 7353255268, ಹಿರಿಯ ಆರೋಗ್ಯ ನಿರೀಕ್ಷಕರು ಮೊ.ಸಂಖ್ಯೆ 6360027331 ಹಾಗೂ ಕಿರಿಯ ಅಭಿಯಂತರರ ಮೊ.ನಂ: 9902377287 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!