Saturday, August 29, 2026
Saturday, August 29, 2026

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

ಉಡುಪಿ, ಜೂ.4: ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕರಾಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಸದಸ್ಯರ ಮಕ್ಕಳು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 85 ಹಾಗೂ 2025ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 70 ಹಾಗೂ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 95, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90 ಹಾಗೂ 2025ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇಕಡಾ 80 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 75 ಹಾಗೂ ಮೇಲ್ಪಟ್ಟು ಅಂಕ ಪಡೆದಿರಬೇಕು.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ http://www.mahalakshmicoopbank.com ನಲ್ಲಿ ಲಭ್ಯವಿದ್ದು, ದಿನಾಂಕ:31-07-2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!