Saturday, August 29, 2026
Saturday, August 29, 2026

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

Date:

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಮತ್ತು ತಾಲೂಕು ಪಂಚಾಯತ್ ಕಾಪು ಇವರ ಜಂಟಿ ಆಶ್ರಯದಲ್ಲಿ, ಶಿರ್ವಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರಂಭಿಸಲಾದ ಸಮಗ್ರ ಕೃಷಿ ಸಮೂಹಗಳ ಜೀವನೋಪಾಯ ಸೇವಾ ಕೇಂದ್ರವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಮಾಹಿತಿ ಕರಪತ್ರವನ್ನು ಬಿಡುಗಡೆ ಮಾಡಿದರು. ಬಳಿಕ, ಕೇಂದ್ರದ ಅಡಿಯಲ್ಲಿದ್ದ ಟ್ರ್ಯಾಕ್ಟರ್, ಟಿಲ್ಲರ್, ರೋಟವೇಟರ್, ಕಲ್ಟಿವೇಟರ್, ವೀಡ್ ಕಟರ್, ಹುಲ್ಲು ಕತ್ತರಿಸುವ ಯಂತ್ರ ಹಾಗೂ ಮಲ್ಲಿಗೆ ಗಿಡಗಳಿಗೆ ಔಷಧ ಸಿಂಪಡಿಸುವ ಯಂತ್ರೋಪಕರಣಗಳನ್ನು ಕಾಪು ತಾಲೂಕಿನ ‘ಶೃಂಗಾರ ಸಂಜೀವಿನಿ ಒಕ್ಕೂಟ’ಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕಾಪು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಕುಮಾರ್, ಶಿರ್ವ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ನಿಧೀಶ್ ಹೊಳ್ಳ, ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಜಯಶ್ರೀ, ಜಿಲ್ಲಾ ವ್ಯವಸ್ಥಾಪಕರಾದ ಸೌಮ್ಯ, ವಲಯ ಮೇಲ್ವಿಚಾರಕರಾದ ಶ್ರೀಮತಿ, ಲಕ್ಷ್ಮಿ ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!