Monday, August 31, 2026
Monday, August 31, 2026

ಪಂಚವರ್ಣ ಸಂಘಟನೆಯ ಸಾಮಾಜಿಕ ಬದ್ಧತೆ ಶ್ಲಾಘನೀಯ: ಸಂಪತ್ ಕುಮಾರ್ ಶೆಟ್ಟಿ

ಪಂಚವರ್ಣ ಸಂಘಟನೆಯ ಸಾಮಾಜಿಕ ಬದ್ಧತೆ ಶ್ಲಾಘನೀಯ: ಸಂಪತ್ ಕುಮಾರ್ ಶೆಟ್ಟಿ

Date:

ಕೋಟ, ಜೂ.6: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ, ಅದರಲ್ಲೂ ಬಹುಮುಖ್ಯವಾಗಿ ಪುನೀತ್ ರಾಜಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು. ಕೋಟದ ಸಮುದ್ಯತಾ ಬ್ಯಾಂಕ್ವೇಟ್ ಹಾಲ್‌ನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನೀತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಮಾತನಾಡಿದ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ, ಪಂಚವರ್ಣ ಸಂಘಟನೆಯ ಸಾಮಾಜಿಕ ಬದ್ಧತೆ ರಾಜ್ಯದಲ್ಲಿರುವ ಸಂಘಟನೆಗಳಿಗೆ ಮಾದರಿಯಾಗಿದೆ. ಇಂತಹ ಸಂಘಟನೆಯ ಜೊತೆ ನಮ್ಮ ಫೌಂಡೇಶನ್ ಗಟ್ಟಿಯಾಗಿ ನಿಂತು ಸಹಕಾರ ನೀಡಲಿದೆ ಎಂದರು. ಸುಮಾರು 80 ಸಾವಿರ ರೂ ಅಧಿಕ ಶೈಕ್ಷಣಿಕ ಪರಿಕರ, ಆರ್ಥಿಕ ನೆರವನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಅಧ್ಯಕ್ಷತೆಯನ್ನು ಪಂಚವರ್ಣ ಸಂಘಟನೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ವಹಿಸಿದ್ದರು. ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿ, ರವೀಂದ್ರ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಸಂತಿ ಹಂದಟ್ಟು ಪತ್ರ ವಾಚಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!