Monday, July 27, 2026
Monday, July 27, 2026

ಮಣಿಪಾಲ ಜ್ಞಾನಸುಧಾ: ವಿಶ್ವ ಪರಿಸರ ದಿನಾಚರಣೆ

ಮಣಿಪಾಲ ಜ್ಞಾನಸುಧಾ: ವಿಶ್ವ ಪರಿಸರ ದಿನಾಚರಣೆ

Date:

ಮಣಿಪಾಲ, ಜೂ.6: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ರೋಟರಿ ಕ್ಲಬ್‌ ಮಣಿಪಾಲದ ಜಂಟಿ ಆಶ್ರಯದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನೊಲೊಜಿ ಮಾಹೆಯ ಸಹಾಯಕ ಪ್ರಾಧ್ಯಾಪಕ ನೌಷ ಶೆಟ್ಟಿ ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್‌ ಮಣಿಪಾಲದ ಅಧ್ಯಕ್ಷೆ ಶಶಿಕಲಾ ರಾಜವರ್ಮ ಪರಿಸರ ಸಂರಕ್ಷಣೆಯ ನಮ್ಮೆಲ್ಲರ ಹಕ್ಕು ಎಂದು ಮಾರ್ಗದರ್ಶನ ನೀಡಿದರು.

ರೋಟರಿ ಕ್ಲಬ್‌ ಮಣಿಪಾಲದ ಕಾರ್ಯದರ್ಶಿ ವಾಣಿಶ್ರೀ ಹಾಗೂ ರೊಟೆರಿಯನ್ ರಾಜವರ್ಮ ಅರಿಗ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಗಿಡ ನೆಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ, ಜೆ.ಇ.ಇ/ನೀಟ್‌ ಫೌಂಡೇಷನ್‌ ಸ್ಟ್ಯೂಡೆಂಟ್‌ ಕೋರ್ಡಿನೇಟರ್‌ ಶಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪೃಕೃತಿ ಕಾರ್ಯಕ್ರಮ ನಿರೂಪಿಸಿದರು. ,ಗಣಿತ ಶಿಕ್ಷಕ ಕಿಶನ್‌ ನಾಯಕ್‌ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!