Sunday, July 26, 2026
Sunday, July 26, 2026

ಗ್ರಾಮೀಣ ಭಾಗದ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಗ್ರಾಮೀಣ ಭಾಗದ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

Date:

ಉಡುಪಿ, ಜೂ.7: ಕಲ್ಯಾಣಪುರ ಗ್ರಾಮ ಪಂಚಾಯತ್ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕರಾದ ಯಶ್ಪಾಲ್ ಸುವರ್ಣ ನೆರವೇರಿಸಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ನಿಡಂಬಳ್ಳಿಯಲ್ಲಿ ಉದ್ಘಾಟನೆಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಎಂ. ಎ. ಗಫೂರ್ ಆರೋಗ್ಯ ಕ್ಷೇತ್ರದ ಸರ್ಕಾರದ ಯೋಜನೆ, ಸೇವೆಗಳು ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸಾರ್ವಜನಿಕರಿಗೆ ಸಿಗುವಂತಾಗಲಿ ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಅಕ್ಷತಾ, ಇಲಾಖೆಯ ಇಂಜಿನಿಯರ್ ಗುರು ಪ್ರಸಾದ್, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರಾಜ್ ಕುಂದರ್,
ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಬಡಾನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ, ಪ್ರಭಾಕರ ತಿಂಗಳಾಯ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮಲತಾ, ನವೀನ್ ಕಾಂಚನ್, ಜಾನ್ಸನ್, ಪ್ರಶಾಂತ್ ಆಚಾರ್ಯ, ಅನಿತಾ ನಾಯ್ಕ್ , ಪ್ರಮುಖರಾದ ಸುಧೀರ್ ಕಲ್ಯಾಣಪುರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!