Sunday, July 26, 2026
Sunday, July 26, 2026

ಡಾ. ಚಂದ್ರಶೇಖರ ದಾಮ್ಲೆಯವರಿಗೆ ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

ಡಾ. ಚಂದ್ರಶೇಖರ ದಾಮ್ಲೆಯವರಿಗೆ ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Date:

ಉಡುಪಿ, ಜೂ.7: ಉಡುಪಿಯಲ್ಲಿ ಕಲೆ, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಮಂಚೂಣಿಯಲ್ಲಿರುವ ಯಕ್ಷಗಾನ ಕಲಾರಂಗವು ಪ್ರತಿವರ್ಷ ನೀಡುತ್ತಿರುವ ತಲ್ಲೂರು ಕನಕಾ ಅಣ್ಣಯ್ಯ ಪ್ರಶಸ್ತಿಯನ್ನು ಈ ವರ್ಷ ಸುಳ್ಯದ ಡಾ. ಚಂದ್ರಶೇಖರ ದಾಮ್ಲೆಯವರಿಗೆ ನೀಡಿ ಗೌರವಿಸಿದೆ. ಐ.ವೈ.ಸಿ. ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಡಾ. ಭೀಮೇಶ್ವರ ಜೋಶಿಯವರು ದಾಮ್ಲೆ ದಂಪತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯು ರೂಪಾಯಿ 60,000/- ನಗದನ್ನು ಒಳಗೊಂಡಿದೆ.

ವಿಶ್ರಾಂತ ಉಪಕುಲಪತಿ ಪ್ರೊ. ವಿವೇಕ ರೈ ಅವರು ಡಾ. ದಾಮ್ಲೆಯವರು ಶಿಕ್ಷಣ ಮತ್ತು ಸಾಹಿತ್ಯದ ಜೊತೆಯಲ್ಲಿ ಯಕ್ಷಗಾನಕ್ಕೆ ರಂಗಭಾಷೆ’ ಎಂಬ ಮಹತ್ವದ ಕೃತಿಯ ಕೊಡುಗೆ ನೀಡಿದ್ದಾರೆ ಎಂದು ಅಭಿನಂದಿಸಿದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ತನ್ನ ಯಕ್ಷಗಾನದ ಮತ್ತು ಶಿಕ್ಷಣದ ಸೇವೆಯನ್ನು ಪರಿಗಣಿಸಿ ನೀಡಿರುವ ಈ ಪ್ರಶಸ್ತಿಯಿಂದಾಗಿ ತಾನು ಮಾಡಿರುವ ಕೆಲಸದ ಸಾರ್ಥಕ ಭಾವ ಮೂಡಿದೆ ಎಂದು ಸನ್ಮಾನಕ್ಕೆ ಉತ್ತರಿಸಿ ಡಾ. ದಾಮ್ಲೆಯವರು ಹೇಳಿದರು. ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಸ್ವಾಗತಿಸಿ ಪ್ರೊ. ನಾರಾಯಣ ಹೆಗಡೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!