Saturday, July 25, 2026
Saturday, July 25, 2026

ಅಪ್ಪ ಅಮ್ಮ ಅನಾಥಾಲಯಕ್ಕೆ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಅಪ್ಪ ಅಮ್ಮ ಅನಾಥಾಲಯಕ್ಕೆ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

Date:

ಕುಂದಾಪುರ, ಜೂ.8: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ವಿದ್ಯಾರ್ಥಿಗಳು ಭೇಟಿ ನೀಡಿದರು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. 2 ವಿದ್ಯಾರ್ಥಿಗಳು ಅವರ ಹುಟ್ಟುಹಬ್ಬದ ಪ್ರಯುಕ್ತ 25 ಲೀಟರ್ ಕುಕ್ಕರ್ ಮತ್ತು ಗ್ಯಾಸ್‌ಸ್ಟವ್ ನೀಡಿದರು. ಹಾಗೆಯೇ ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ರಜತ್ ಬಂಗೇರ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಕ್ಷಯ್ ಕುಮಾರ್ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!