Monday, August 31, 2026
Monday, August 31, 2026

ಉಡುಪಿ ಸರ್ವೀಸ್ ಬಸ್ ನಿಲ್ದಾಣ ತುರ್ತು ಕಾಮಗಾರಿಗೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ ಸರ್ವೀಸ್ ಬಸ್ ನಿಲ್ದಾಣ ತುರ್ತು ಕಾಮಗಾರಿಗೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಜೂ.9: ಉಡುಪಿ ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದೇ ಮಳೆ ಬರುವ ಸಂದರ್ಭದಲ್ಲಿ ಮೇಲ್ಛಾವಣಿ ಮಳೆ ನೀರು ಸೋರಿ ಪ್ರಯಾಣಿಕರು ಕೊಡೆ ಹಿಡಿದು ಬಸ್ ನಿಲ್ದಾಣದಲ್ಲಿ ಕಾಯುವ ಸ್ಥಿತಿ ಬಗ್ಗೆ ಮಾಧ್ಯಮಗಳ ವರದಿಯ ಹಿನ್ನಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣದ ಮೇಲ್ಛಾವಣಿಯ ಶೀಟುಗಳು ಶಿಥಿಲಗೊಂಡು ಗಾಳಿ, ಮಳೆ, ಬಿಸಿಲಿಗೆ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು 2 ದಿನಗಳಲ್ಲಿ ತುರ್ತು ಕಾಮಗಾರಿ ನಡೆಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು. ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿಯ ಬಗ್ಗೆ ಪ್ರಯಾಣಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಬಸ್ ನಿಲ್ದಾಣದ ಸಮಗ್ರ ಅಭಿವೃದ್ಧಿ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಗರ ಸಭೆ ಹಾಗೂ ರಾಜ್ಯ ಸರ್ಕಾರದ ಅನುದಾನ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ತಿಳಿಸಿದರು.

ನಗರಸಭೆ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಗಿರಿಧರ ಆಚಾರ್ಯ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಮಂಜು ಕೊಳ, ಲಕ್ಷ್ಮಣ್ ಮಲ್ಪೆ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!