Saturday, October 17, 2026
Saturday, October 17, 2026

ಸಾಲಿಗ್ರಾಮ ಪ.ಪಂಚಾಯತ್: ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಸಾಲಿಗ್ರಾಮ ಪ.ಪಂಚಾಯತ್: ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

Date:

ಉಡುಪಿ, ಜೂ.10: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು, ವ್ಯಾಪಾರೋದ್ಯಮಗಳು, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಮತ್ತು ಇತರೆ ವಾಣಿಜ್ಯ ಉದ್ದಿಮೆದಾರರುಗಳು, ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಏಪ್ರಿಲ್ 01 2026 ರಿಂದ ಜಾರಿಗೆ ತಂದಿರುವ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು -2026 ರ ನಿಯಮದ ಪ್ರಕಾರ, ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ವಸ್ತುಗಳನ್ನು ಈ ಕೆಳಕಂಡಂತೆ 4 ವಿಧಗಳಾಗಿ ಕಡ್ಡಾಯವಾಗಿ ಮೂಲದಲ್ಲಿಯೇ ವಿಂಗಡಿಸಿ, ಪಟ್ಟಣ ಪಂಚಾಯತ್ ಘನತ್ಯಾಜ್ಯ ವಾಹನಗಳಿಗೆ ನೀಡಬೇಕು.

ಹಸಿ ತ್ಯಾಜ್ಯ: ಅಡಿಗೆ ಮನೆ ತ್ಯಾಜ್ಯ, ಆಹಾರ ತ್ಯಾಜ್ಯ, ತರಕಾರಿ ತ್ಯಾಜ್ಯ, ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ, ಹೂವಿನ ತ್ಯಾಜ್ಯ, ಗಾರ್ಡನ್ ತ್ಯಾಜ್ಯ ಇತರೆ ಕರಗುವ ತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿಯೇ ವಿಂಗಡಿಸಿ ತಮ್ಮ ತಮ್ಮ ಮನೆ ಹಂತದಲ್ಲಿಯೇ ಪೈಪ್ ಕಾಂಪೋಸ್ಟ್, ಬಿನ್ ಕಾಂಪೋಸ್ಟ್, ಪಿಟ್ ಕಾಂಪೋಸ್ಟ್ ಇತರೆ ವಿಧಾನದ ಮುಖಾಂತರ ವಿಲೇ ಮಾಡಬೇಕು.

ಒಣ ತ್ಯಾಜ್ಯ: ಎಲ್ಲಾ ರೀತಿಯ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳು, ಬಟ್ಟೆಯ ತ್ಯಾಜ್ಯವನ್ನು ಪ್ರತ್ಯೇಕವಾಗಿ ಪಟ್ಟಣ ಪಂಚಾಯತ್ ಘನತ್ಯಾಜ್ಯ ವಾಹನಗಳಿಗೆ ನೀಡಬೇಕು.

ಸ್ಯಾನಿಟರಿ ತ್ಯಾಜ್ಯ: ಡೈಪರ್, ಸ್ಯಾನಿಟರಿ ನ್ಯಾಪ್ಕಿನ್ಸ್, ಕಾಂಡೂಮ್ಸ್ ಪ್ರತ್ಯೇಕವಾಗಿ ಪಟ್ಟಣ ಪಂಚಾಯತ್ ಘನತ್ಯಾಜ್ಯ ವಾಹನಗಳಿಗೆ ನೀಡಬೇಕು.

ವಿಶೇಷ ಕಾಳಜಿ ತ್ಯಾಜ್ಯ: ಪೈಂಟ್ ಡ್ರಮ್ಸ್ / ಡಬ್ಬಾ ಕೀಟನಾಶಕ ಔಷದಿಗಳ ಡಬ್ಬಾ, ಅವಧಿ ಮೀರಿದ ಔಷಧಿಗಳು, ಬಲ್ಬ್, ಟ್ಯೂಬ್ ಲೈಟ್, ಒಡೆದ ಥರ್ಮಾಮೀಟರ್, ಹಳೆಯ ಬ್ಯಾಟರಿಗಳು, ಬಳಸಿದ ಸಿರಿಂಜ್ ನೀಡಲ್ಸ್ಗಳನ್ನು ಪ್ರತ್ಯೇಕವಾಗಿ ಪಟ್ಟಣ ಪಂಚಾಯತ್ ಘನತ್ಯಾಜ್ಯ ವಾಹನಗಳಿಗೆ ನೀಡಬೇಕು.

ಈ ಮೇಲ್ಕಂಡಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ವಿಂಗಡಿಸಿ ಪಟ್ಟಣ ಪಂಚಾಯತ್ ವಾಹನಗಳಿಗೆ ನೀಡಬೇಕು. ತಪ್ಪಿದಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು-2026 ರಂತೆ ತ್ಯಾಜ್ಯ ವಿಂಗಡಣೆ ಮಾಡದೇ ಇರುವವರ ವಿರುದ್ಧ ದಂಡ ವಿಧಿಸುವುದಲ್ಲದೇ ಮೂಲಭೂತ ಸೌಕರ್ಯಗಳಾದ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು-2026 ರನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಹಕರಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!