Sunday, October 18, 2026
Sunday, October 18, 2026

ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜೂ.10: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ವಿದ್ಯಾರ್ಥಿಗಳಿಂದ ಮಾತ್ರ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರಸ್ತುತ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್‌ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ಕಾಲೇಜಿಗೆ ಇರುವ ದೂರದ ಬಗ್ಗೆ ದೂರದ ಪ್ರಮಾಣ ಪತ್ರ, ಫೋಟೋಗಳೊಂದಿಗೆ ಅರ್ಜಿಯನ್ನು ಜೂನ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಕ್ಯಾತರ ಮಾಹಿತಿ ಕೇಂದ್ರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!